ಕೂಗು ನಿಮ್ಮದು ಧ್ವನಿ ನಮ್ಮದು

ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವಲ್ಲಿ ಸಿಬಿಐನ ಪಾತ್ರ ದೊಡ್ಡದು: ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಕೇಂದ್ರೀಯ ತನಿಖಾ ದಳದ ವಜ್ರಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿದ್ದಾರೆ. ಈ ವೇಳೆ ಸಿಬಿಐನ ವಜ್ರ ಮಹೋತ್ಸವದ ವರ್ಷವನ್ನು ಗುರುತಿಸುವ ಅಂಚೆ ಚೀಟಿ ಮತ್ತು ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡುವುದರ ಜೊತೆಗೆ ಸಿಬಿಐನ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಮೋದಿ ಬಿಡುಗಡೆ ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಮೋದಿ ಅವರು ವಿಶೇಷ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ಮತ್ತು ಏಜೆನ್ಸಿಯ ಅತ್ಯುತ್ತಮ ತನಿಖಾ ಅಧಿಕಾರಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿದ್ದಾರೆ.

ಮೋದಿ ಶಿಲ್ಲಾಂಗ್, ಪುಣೆ ಮತ್ತು ನಾಗ್ಪುರದಲ್ಲಿ ಹೊಸದಾಗಿ ನಿರ್ಮಿಸಲಾದ ಸಿಬಿಐ ಕಚೇರಿ ಸಂಕೀರ್ಣಗಳನ್ನು ಉದ್ಘಾಟಿಸಿದ್ದಾರೆ. ಏಪ್ರಿಲ್ 1, 1963 ರಂದು ಕೇಂದ್ರ ಗೃಹ ಸಚಿವಾಲಯದ ನಿರ್ಣಯದ ಮೂಲಕ ಸಿಬಿಐ ಅನ್ನು ಸ್ಥಾಪಿಸಲಾಯಿತು. ಮೋದಿ ಭಾಷಣದ ಮುಖ್ಯಾಂಶಗಳು
ಸಿಬಿಐನ ವಜ್ರಮಹೋತ್ಸವದ ಸಮಾರಂಭದಲ್ಲಿ ಭಾಷಣ ಮಾಡಿದ ಮೋದಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಸಿಬಿಐ ಜನರ ವಿಶ್ವಾಸವನ್ನು ಗೆದ್ದಿದೆ. ಏನಾದರೂ ತನಿಖೆ ಬಂದರೆ ಜನರು ಅದನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಬಯಸುತ್ತಾರೆ.ಯಾಕೆಂದರೆ ಅವರಿಗೆ ಅದರ ಮೇಲೆ ಅಷ್ಟೊಂದು ವಿಶ್ವಾಸವಿಗೆ. ಈ ರೀತಿ ಜನರ ನಂಬುಗೆ ಪಡೆಯುವುದು ಅಷ್ಟೊಂದು ಸುಲಭವಲ್ಲ. ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವಲ್ಲಿ ಸಿಬಿಐನ ಪಾತ್ರ ದೊಡ್ಡದು.

ಸಿಬಿಐ ಸಾಮಾನ್ಯ ನಾಗರಿಕರಿಗೆ ಭರವಸೆ ಮತ್ತು ಶಕ್ತಿಯನ್ನು ನೀಡಿದೆ. ಸಿಬಿಐ ನ್ಯಾಯಕ್ಕಾಗಿ ಬ್ರಾಂಡ್ ಆಗಿ ಹೊರಹೊಮ್ಮಿರುವುದರಿಂದ ಸಿಬಿಐ ತನಿಖೆಗೆ ಒತ್ತಾಯಿಸಿ ಜನರು ಪ್ರತಿಭಟನೆಗಳನ್ನು ನಡೆಸುತ್ತಾರೆ. ಸಿಬಿಐನಂಥಾ ವೃತ್ತಿಪರ ಮತ್ತು ದಕ್ಷ ಸಂಸ್ಥೆಗಳಿಲ್ಲದೆ ಭಾರತ ಮುಂದುವರಿಯಲು ಸಾಧ್ಯವಿಲ್ಲ. ಬ್ಯಾಂಕ್ ವಂಚನೆಗಳಿಂದ ಹಿಡಿದು ವನ್ಯಜೀವಿಗಳಿಗೆ ಸಂಬಂಧಿಸಿದ ವಂಚನೆಗಳವರೆಗೆ, ಸಿಬಿಐನ ಕಾರ್ಯವ್ಯಾಪ್ತಿಯು ಹಲವಾರು ಪಟ್ಟು ಹೆಚ್ಚಾಗಿದೆ
ಪ್ರಜಾಪ್ರಭುತ್ವ ಮತ್ತು ನ್ಯಾಯಕ್ಕೆ ಭ್ರಷ್ಟಾಚಾರವು ಅತಿದೊಡ್ಡ ತಡೆಯಾಗಿದೆ, ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಸಿಬಿಐನ ಪ್ರಮುಖ ಜವಾಬ್ದಾರಿಯಾಗಿದೆ.

error: Content is protected !!