ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಪಂಚಾಯತ್ ವತಿಯಿಂದ, ಬೀಳಗಿ ವಿಧಾನಸಭಾ ಕ್ಷೇತ್ರದ ಕಜ್ಜಿದೋಣಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ – 19 ನಿಯಂತ್ರಣ ಕ್ರಮಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಮುರಗೇಶ ನಿರಾಣಿ ಪಾಲ್ಗೊಂಡರು. ಈ ಸಭೆಯಲ್ಲಿ ಮಾತನಾಡಿದ ಅವರು, 3 ನೇ ಅಲೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಇನ್ನಷ್ಟು ಜಾಗರೂಕರಾಗಿಬೇಕೆಂದು ಮನವಿ ಮಾಡಿದರು.
ಮತ್ತು ಕೋವಿಡ್ 19 ಮಾರ್ಗಸೂಚಿಗಳನ್ನು ಚಾಚು ತಪ್ಪದೇ ಪಾಲಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾನಿಟೈಸರ್ ಬಳಕೆ ಮಾಡುವುದು ಸೇರಿದಂತೆ ಇನ್ನಿತರ ನಿಯಮಗಳನ್ನು ಪರಿಪಾಲಿಸುವ ಕುರಿತು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ, ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಪೌರ ಕಾರ್ಮಿಕರು ಸೇರಿದಂತೆ ಎಲ್ಲಾ ಕೊರೋನಾ ಮುಂಚೂಣಿ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.