ಕೂಗು ನಿಮ್ಮದು ಧ್ವನಿ ನಮ್ಮದು

ಕರ್ನಾಟಕದ ಇಬ್ಬರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಬಹುತೇಕ ಪೀಕ್ಸ್; ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ರಾಜ್ಯದ ಎರಡು, ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಪಕ್ಕಾ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕೆಐಎ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವರು, ಜಾತಿವಾರು ಲೆಕ್ಕಾಚಾರ ಪ್ರಕಾರ ಲಿಂಗಾಯತರಿಗೆ ಒಂದು, ಪರಿಶಿಷ್ಟ ಜಾತಿಗೆ ಒಂದು ಪಕ್ಕಾ ಆಗಿದೆ. ಮತ್ತೊಂದು ಯಾರಿಗೆ ಕೊಡ್ತಾರೋ ನೋಡಬೇಕು ಎಂದು ಅಭಿಪ್ರಾಯಪಟ್ಟರು.

ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ ಮೂವರ ಪೈಕಿ ಒಬ್ಬರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ತಿಳಿಸಿದ ನಿರಾಣಿ, ನಿನ್ನೆ ದೆಹಲಿಗೆ ಹೋಗಿದ್ದು ವೈಯುಕ್ತಿಕ ಕೆಲಸದ ಮೇಲೆ ಎಂದಿದ್ದಾರೆ.
ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆ ಕರ್ನಾಟಕದ ಕೆಲ ಸಂಸದರು ದೆಹಲಿಯಲ್ಲಿದ್ದಾರೆ. ಬಿಜೆಪಿ ಸಂಸದರಾದ ಆನೇಕಲ್ ನಾರಾಯಣಸ್ವಾಮಿ, ರಮೇಶ್ ಜಿಗಜಿಣಗಿ, ಉಮೇಶ್ ಜಾಧವ್, ಶೋಭಾ ಕರಂದ್ಲಾಜೆ ದೆಹಲಿಗೆ ತೆರಳಿದ್ದಾರೆ. ಇವರಲ್ಲಿ ಯಾರಿಗೆ ಸ್ಥಾನ ಸಿಗುತ್ತೆ ಎಂಬ ಕುತೂಹಲ ಮೂಡಿದೆ.

error: Content is protected !!