ಬೆಳಗಾವಿ: ಇದೆ ಫೆಬ್ರವರಿ 27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕುಂದಾ ನಗರಿ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಮಾಲಿನಿ ಸಿಟಿಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯಭರದಿಂದ ಸಾಗಿದೆ.
2023 ರ ವಿಧಾನ ಸಭಾ ಚುನಾವಣೆಯ ದೃಷ್ಟಿಯಿಂದ ಬೆಳಗಾವಿಯ ಮೂರು ಪ್ರಮುಖ ಕ್ಷೇತ್ರಗಳಾದ ಬೆಳಗಾವಿ ಉತ್ತರ, ದಕ್ಷಿಣ, ಗ್ರಾಮೀಣ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಬಿಜೆಪಿ ಈ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಸಮಾವೇಶದಲ್ಲಿ ಸುಮಾರು 3-4 ಲಕ್ಷ ಜನ ಸೇರಿಸಲು ಬಿಜೆಪಿ ನಾಯಕರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಪಿಎಂ ಮೋದಿ ಬೃಹತ್ ಸಮಾವೇಶ ಯಶಸ್ವಿಗೆ ಬಿಜೆಪಿಯ ಸ್ಥಳೀಯ ನಾಯಕರು ಭಾರಿ ಸಿದ್ಧತೆ ನಡೆಸುತ್ತಿದ್ದಾರೆ.
ಬೆಳಗಾವಿಯಲ್ಲಿ ಇದೇ ಮೊದಲ ಬಾರಿಗೆ ಪಿಎಂ ಮೋದಿ ರೋಡ್ ಶೋ ಆಯೋಜನೆ ಮಾಡಲಾಗಿದೆ. ಈ ಬೃಹತ್ ರೋಡ್ ಶೋಗೆ ಮೂರ್ನಾಲ್ಕು ರೋಡ್ ಗಳನ್ನು ಫೈನಲ್ ಮಾಡಲಾಗಿದೆ. ಎಸ್’ಪಿಜಿ ಅನುಮತಿ ಬಳಿಕ ಒಂದು ರೋಡ್’ನಲ್ಲಿ ಪಿಎಂ ಮೋದಿ ಅವರು ಸುಮಾರು 8 ಕಿಮೀ ರೋಡ್ ಶೋ ಮಾಡಲಿದ್ದಾರೆ. ಈ ರೋಡ್ ಶೋನಲ್ಲಿ ಪಿಎಂ ಮೋದಿ ಅವರು ಮಾಡಿದ ಕೆಲಸಗಳನ್ನು ಅನಾವರಣಕ್ಕೆ ಸ್ಥಳಿಯ ನಾಯಕರ ಸಿದ್ಧತೆ ನಡೆಸುತ್ತಿದ್ದಾರೆ. ಇದಕ್ಕಾಗಿ, ಎಲ್ಲಾ ರಾಜ್ಯಗಳ ವೇಶಭೋಷಣ ಬಿಂಬಿಸುವ ಕಾರ್ಯಕ್ರಮಗಳ ಆಯೋಜನೆ ಮಾಡಿದ್ದಾರೆ. ಅಲ್ಲದೆ, ರಾಜ್ಯ ಹಾಗೂ ದೇಶದ ಮಹಾನ ಪುರುಷರ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ. ಶಾಸಕ ಅಭಯ ಪಾಟೀಲ, ಅನಿಲ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ ನೇತೃತ್ವದಲ್ಲಿ ಸಿದ್ಧತೆ ಮಾಡಲಾಗುತ್ತಿದೆ.