ಬೆಳಗಾವಿ: ಬೆಳಗಾವಿಯಲ್ಲಿ 10.7 ಕಿ.ಮೀ ರೋಡ್ ಶೋ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಳಗಾವಿಗಿಂದು ಆಗಮಿಸಲಿದ್ದು ಸಮಾವೇಶದ ವೇದಿಕೆಗೆ ಆಗಮಿಸುವ ಮುನ್ನ ರೋಡ್ ಶೋ ಮಾಡಲಿದ್ದಾರೆ.
ಚೆನ್ನಮ್ಮ ಸರ್ಕಲ್ನಿಂದ 10.7 ಕಿ.ಮೀ ರೋಡ್ ಶೋ ನಡೆಯಲಿದೆ. ರೋಡ್ ಶೋ ಬಳಿಕ ವೇದಿಕೆಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯ ದೇಶದ 8 ಕೋಟಿ ರೈತರಿಗೆ 16 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಿದ್ದಾರೆ.