ಬೆಳಗಾವಿ ನಗರದ ಹಲವೆಡೆ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಿಪ್ಪಾಣಿಯಿಂದ ಖಾನಾಪುರ, ಗೋವಾಕ್ಕೆ ತೆರಳುವ ಮಾರ್ಗ ಬದಲಾವಣೆ ಮಾಡಲಾಗಿದೆ. ಬಾಕ್ಸೈಟ್ ರಸ್ತೆ, ಹಿಂಡಲಗಾ ಗಣಪತಿ ದೇವಸ್ಥಾನ, ಶೌರ್ಯ ಸರ್ಕಲ್, ಕಾಂಗ್ರೆಸ್ ರಸ್ತೆ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಶಹಾಪುರ ಕಡೆಯಿಂದ ಬರುವ ವಾಹನಗಳು ಇದೇ ಮಾರ್ಗವಾಗಿ ನಿಪ್ಪಾಣಿ ಕಡೆಗೆ ಸಂಚರಿಸುವಂತೆ ಬೆಳಗಾವಿ ಸಂಚಾರ ಪೊಲೀಸರು ಸೂಚಿಸಿದ್ದಾರೆ. ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ