ಕೂಗು ನಿಮ್ಮದು ಧ್ವನಿ ನಮ್ಮದು

ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ: 1-9 ನೇ ತರಗತಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಒಂದು ವಾರ ಶಾಲೆಗಳು ಬಂದ ಆಗಲಿವೆ. ಕೊರೊನಾ ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿರುವ ಹಿನ್ನೆಲೆ ನಾಳೆಯಿಂದ ಒಂದು ವಾರ ಶಾಲೆ ಬಂದ್ ಮಾಡಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಮಾಡಿದ್ದಾರೆ.

ಜನೇವರಿ 11 ರಿಂದ 18 ರವರೆಗೆ ಶಾಲೆ ಬಂದ್ ಆಗಲಿದ್ದು, ಬೆಳಗಾವಿ ಜಿಲ್ಲೆಯಲ್ಲಿ 1 ರಿಂದ 9ನೇ ತರಗತಿಯವರೆಗಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳಲ್ಲಿ ಕೊರೊನಾ ಸೋಂಕು ಉಲ್ಬಣ ಹಿನ್ನೆಲೆ ಬೆಳಗಾವಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಕೋವಿಡ್ ವ್ಯಾಪಿಸುತ್ತಿರುವ ಹಿನ್ನೆಲೆ ಇಂದು ಅಧಿಕಾರಿಗಳ ಸಭೆ ಮಾಡಿದ್ದೆ, ಡಿಹೆಚ್‌ಒ, ಡಿಡಿಪಿಐ ಜೊತೆ ಸಭೆ ನಡೆಸಿದಾಗ ಏಳು ದಿನದ ಮಟ್ಟಿಗೆ 1 ರಿಂದ‌ 9 ತರಗತಿಗಳ ಶಾಲೆಗಳ ಬಂದ್‌ಗೆ ಸಲಹೆ ಬಂದ ಹಿನ್ನೆಲೆ ವಸತಿ ಶಾಲೆಗಳು ಒಳಗೊಂಡಂತೆ 1 ರಿಂದ 9ನೇ ತರಗತಿಯವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

error: Content is protected !!