ಬೆಳಗಾವಿ: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಆಗ್ರಹಿಸಿ ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರಯ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಸ್ವಾಮೀಜಿ ನೇತೃತ್ವದಲ್ಲಿ ನೂರಾರು ಜನ ಪಂಚಮಸಾಲಿ ಸಮುದಾಯದ ಕಾರ್ಯಕರ್ತರು, ಮುಖಂಡರು ಧರಣಿ ನಡೆಸುತ್ತಿದ್ದಾರೆ. ಇನ್ನು ಸ್ವಾಮೀಜಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿದರು. ಈ ವೇಳೆ ಸರ್ಕಾರ ಸದಾ ನಿಮ್ಮ ಸಮುದಾಯದ ಪರವಾಗಿ ಇರಲಿದೆ ಎಂದ ಸಚಿವ ಜಾರಕಿಹೊಳಿ, ನಿಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದರು. ಈ ವೇಳೆ ರಮೇಶ್ ಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಅವಕಾಶ ಇದೆ. ರಮೇಶ್ ಸಾಹುಕಾರ್ ಮುಂದೊಂದು ದಿನ ಕಿಂಗ್ ಆಗಲಿದ್ದಾರೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದು ವಿಶೇಷವಾಗಿತ್ತು. ಇನ್ನು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಆಗ್ರಹಿಸಿ ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರಯ ನೇತೃತ್ವದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಮುಖಂಡರು ಸಚಿವ ರಮೇಶ್ ಜಾರಕಿಹೊಳಿಯರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸರು.