ಕೂಗು ನಿಮ್ಮದು ಧ್ವನಿ ನಮ್ಮದು

ಯಾರ್ ಕೂಡಾನೂ ಮೈತ್ರಿ ಇಲ್ಲ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ: ಪ್ರಿಯಾಂಕಾ ಗಾಂಧಿ

ಲಕ್ನೋ: ಮುಂದೆ ಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಯಾರು ಕೂಡಾನು ಮೈತ್ರಿ ಮಾಡಿಕೊಳ್ಳುವುದಿಲ್ಲ. ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆ ಎಂದು ಐ.ಎ.ಸಿ.ಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ರು. ಬುಲಂದರ್ ಶಹರ್‍ನಲ್ಲಿ ನಡೆದಿರುವ ಸಭೆಯಲ್ಲಿ ಮಾತನಾಡಿದ ಪ್ರೀಯಾಂಕಾ, ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುಣಾವಣೆಯಲ್ಲಿ ಇತರ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿಯ ಯಾವುದೇ ಸಾಧ್ಯತೆಗಳು ಇರುವುದಿಲ್ಲ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಮಾತ್ರ ನಾವು ನಾಮನಿರ್ದೇಶನ ಮಾಡುತ್ತೇವೆ. ಒಂದು ವೇಳೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ರೆ ಅದು ತನ್ನ ಸ್ವಂತ ಸಾಮರ್ಥ್ಯದಿಂದ ಗೆಲುವು ಸಾಧಿಸಲಿದೆ ಎಂದು ಪ್ರೀಯಾಂಕಾ ಹೇಳಿದ್ರು.

error: Content is protected !!