ಬೆಳಗಾವಿ: “ಪೆಟ್ರೋಲ್ 100 ನಾಟೌಟ್” ಹೋರಾಟದ ಭಾಗವಾಗಿ ಮುನವಳ್ಳಿಯಲ್ಲಿ ಇಂದು ಕಾಂಗ್ರೆಸ್ ಮುಖಂಡ ಪಂಚನಗೌಡ ದ್ಯಾಮನಗೌಡರ ನೇತೃತ್ವದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ತೈಲ ಬೆಲೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಸಾಧನೆ ಗೈದಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕೇವಲ ವಾಹನ ಸವಾರರಿಗಷ್ಟೇ ಅಲ್ಲದೇ, ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಉಂಟಾಗುತ್ತದೆ. ಕಾಂಗ್ರೆಸ್ ಹಾಗೂ ಇನ್ನಿತರ ವಿರೋಧ ಪಕ್ಷಗಳು ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಹೋರಾಟ ಮಾಡುತ್ತಿವೆ. ಇದು ಇಡೀ ದೇಶದ ಜನರ ಸಮಸ್ಯೆಯಾಗಿರುವುದರಿಂದ, ಜನರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ಅಂದಾಗ ಮಾತ್ರ ಪ್ರತಿಭಟನೆ ಯಶಸ್ವಿಯಾಗಿ, ಸರ್ಕಾರಕ್ಕೆ ಬಿಸಿ ತಟ್ಟುತ್ತದೆ”.ಈ ಸಂದರ್ಬದಲ್ಲಿ ರವೀಂದ್ರ ಯಲಿಗಾರ,ಪರಶುರಾಮ ಗಂಟಿ, ಹಾರೂನ್ ಹುಕ್ಕೇರಿ ಭಾಗವಹಿಸಿದರು.