ಬೆಂಗಳೂರು: ಮಾರ್ಚ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗಾಗಲೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. 2022-23 ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಲಾಖೆ ಸಿಹಿ ಸುದ್ದಿ ನೀಡಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಇಲಾಖೆ ಈ ಬಾರಿಯ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯಲ್ಲಿ ಎಲ್ಲ ವಿಷಯಗಳಲ್ಲೂ 1 ಅಂಕದ 20 ಪ್ರಶ್ನೆಗಳನ್ನು ಕೇಳಿದೆ.
ಪ್ರತಿ ವರ್ಷ 5 ಅಥವಾ 6 ಮಾತ್ರ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು. ಈ 20 ಪ್ರಶ್ನೆಗಳಲ್ಲಿ 12 ಬಹುಆಯ್ಕೆ ಪ್ರಶ್ನೆಗಳು (MCQ), ಕೆಲವು ಬಿಟ್ಟಸ್ಥಳ ತುಂಬಿರಿ ಮತ್ತು ಹೊಂದಿಸಿ ಬರೆಯಿರಿ ಇತ್ಯಾದಿ ಪ್ರಶ್ನೆಗಳನ್ನು ಕೇಳಿದೆ. ಈ ಬದಲಾವಣೆ ಹೊರತಾಗಿಯೂ ಪ್ರಶ್ನೆಪತ್ರಿಕೆ ಮಾದರಿ ಮೊದಲಿನಂತೆಯೇ ಉಳಿಯುತ್ತದೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಹಿಂದುಗೆ ಎಚ್.ಎನ್. ಕೆಎಸ್ಇಎಬಿಯ ನಿರ್ದೇಶಕ ಗೋಪಾಲಕೃಷ್ಣ ಹೇಳಿದ್ದಾರೆ.
ಈ ಬದಲಾವಣೆ ಏಕೆ
ದ್ವಿತೀಯ ಪಿಯುಸಿ ಪರೀಕ್ಷೆಗೆ 6 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಳ್ಳುದ್ದು, ಆದರೆ ಅವರಲ್ಲಿ ಪಾಸಾಗುವರ ಸಂಖ್ಯೆ ಕಡಿಮೆ ಇದೆ. ಪ್ರತಿ ವರ್ಷ ದ್ವಿತೀಯ ಪಿಯುಸಿಯಲ್ಲಿ ಪಾಸಾದ ವಿದ್ಯಾರ್ಥಿಗಳ ಸಂಖ್ಯೆ ಶೇ 60% ಕ್ಕಿಂತ ಮೀರುತ್ತಿಲ್ಲ. ಹೀಗಾಗಿ ಫಲಿತಾಂಶವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಸಿಬಿಎಸ್ಇಯಂತಹ ಕೇಂದ್ರ ಮಂಡಳಿಯ ಸಂಸ್ಥೆಗಳಲ್ಲಿ, 12 ನೇ ತರಗತಿಯಲ್ಲಿ ಪಾಸಾದ ವಿದ್ಯಾರ್ಥಿಗಳ ಸಂಖ್ಯೆ ಶೇ 90%ಕ್ಕಿಂತ ಹೆಚ್ಚಾಗಿದೆ. ಈ ಫಲಿತಾಂಶಕ್ಕೆ ಕಾರಣ ವಸ್ತುನಿಷ್ಠ ಪ್ರಶ್ನೆಗಳು ಮತ್ತು ಬಹುಆಯ್ಕೆಯ ಪ್ರಶ್ನೆಗಳಿಗೆ ಹೆಚ್ಚಿನ ಒತ್ತು ನೀಡುವುದು. ಕೆಲವು ನೆರೆಯ ರಾಜ್ಯಗಳು ಕೂಡ ಫಲಿತಾಂಶವನ್ನು ಸುಧಾರಿಸಲು ಇದೇ ಸೂತ್ರವನ್ನು ಅಳವಡಿಸಿಕೊಂಡಿವೆ.
ಗ್ರೇಸ್ ಮಾರ್ಕ್ಸ್ ಸೂತ್ರ
ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಬದಲಾವಣೆಯನ್ನು ಸಹ ಅಂತಿಮಗೊಳಿಸಲಾಗಿದೆ. ವಿದ್ಯಾರ್ಥಿಗಳು ಈ ಹಿಂದೆ ಎರಡು ವಿಷಯಗಳಿಗೆ ಶೇ 5 ರಷ್ಟು ಗ್ರೇಸ್ ಮಾರ್ಕ್ಸ್ ಪಡೆಯುತ್ತಾರೆ, ಒಂದು ಭಾಷೆಯಲ್ಲಿ ಮತ್ತು ಇನ್ನೊಂದು ಪ್ರಮುಖ ವಿಷಯದಲ್ಲಿ. ವಿದ್ಯಾರ್ಥಿಗಳು ಯಾವುದೇ ಎರಡು ವಿಷಯಗಳಲ್ಲೂ ಒಂದೇ ರೀತಿ ಗ್ರೇಸ್ ಮಾರ್ಕ್ಸ್ ಪಡೆಯುತ್ತಾರೆ. ಒಟ್ಟು 600 ಅಂಕಗಳಲ್ಲಿ 210 ಪಡೆಯುವ ವಿದ್ಯಾರ್ಥಿಯು ಗ್ರೇಸ್ ಅಂಕಗಳನ್ನು ಪಡೆಯಲು ಅರ್ಹನಾಗಿರುತ್ತಾನೆ.
ಈ ಬಗ್ಗೆ ನಿರ್ದೇಶಕ ಗೋಪಾಲಕೃಷ್ಣ ಮಾತನಾಡಿ ಫಲಿತಾಂಶವನ್ನು ಸುಧಾರಿಸು ನಿಟ್ಟಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆಲವು ನಿಯಮಗಳನ್ನು ಮಾರ್ಪಡಿಸಿದ್ದೇವೆ. ಗ್ರೇಸ್ ಮಾರ್ಕ್ಸ್, ವಸ್ತುನಿಷ್ಠ ಪ್ರಶ್ನೆಗಳನ್ನು ಕೇಳುವುದರಿಂದ ಮತ್ತು ಮರು ಮೌಲ್ಯಮಾಪನ ಕೂಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಅನುಕೂಲವಾಗುತ್ತದೆ ಹೆಚ್ಚಿಸುತ್ತದೆ. ”
ಗ್ರೇಸ್ ಮಾರ್ಕ್ಸ್ ಈ ವರ್ಷದಿಂದ 10 ನೇ ತರಗತಿಗೆ ಅಳವಡಿಕೆ
ಮಂಡಳಿಯು ಈ ವರ್ಷದಿಂದ 10ನೇ ತರಗತಿಯಲ್ಲೂ ಗ್ರೇಸ್ ಮಾರ್ಕ್ಸ್ ಕೊಡಲು ನಿರ್ಧರಿಸಿದೆ. ಮೂರು ವಿಷಯಗಳಲ್ಲಿ ಮಾತ್ರ ಶೇ 10 ರಷ್ಟು ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ. ಒಟ್ಟು 625 ಅಂಕಗಳಲ್ಲಿ 219 ಅಂಕಗಳನ್ನುಗಳಿಸುವ ವಿದ್ಯಾರ್ಥಿಗಳು ಮಾತ್ರ ಗ್ರೇಸ್ ಅಂಕಗಳನ್ನು ಪಡೆಯಲು ಅರ್ಹರಾಗುತ್ತಾರೆ.