ಬೆಂಗಳೂರು: ನಮ್ಮ ಅಭ್ಯರ್ಥಿಗೆ ಬಹುಮತ ಇದೆ. ಅವರು ಗೆದ್ದೆ ಗೆಲ್ಲುತ್ತಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ಗೆಲ್ಲುವ ಚಾನ್ಸ್ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಆರ್.ಟಿ. ನಗರದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಅಶೋಕ್ ಅವರು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿ ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಗೆದ್ದೆ ಗೆಲ್ಲುತ್ತಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಗೆಲ್ಲುವುದಕ್ಕೆ ಅವಕಾಶವೇ ಇಲ್ಲ. ಆದರೂ ಸುಮ್ಮನೆ ನಾಟಕವಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ನಮ್ಮಲ್ಲಿ ಅಡ್ಡ ಮತದಾನ ಯಾವುದೇ ಕಾರಣಕ್ಕೂ ಆಗುವುದಿಲ್ಲ. ಬಿಜೆಪಿ ಹೈಕಮಾಂಡ್ ತುಂಬಾ ಸ್ಟ್ರಾಂಗ್ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್‍ನಲ್ಲಿ ಆತ್ಮ ಬೇರೆ ಸಾಕ್ಷಿ ಬೇರೆ ಆಗಿದೆ. ನಮ್ಮಲ್ಲಿ ಎರಡನೇ ಪ್ರಶಾಸ್ತದ ೯೦ ಮತಗಳಿವೆ. ನಾವು ಗೆದ್ದೆ ಗೆಲ್ಲುತ್ತೇವೆ. ನಮ್ಮ ಮೂರನೇ ಅಭ್ಯರ್ಥಿಯೂ ಸಹ ಗೆದ್ದೆ ಗೆಲ್ಲುತ್ತಾರೆ ಎಂದಿದ್ದಾರೆ.