ಕೂಗು ನಿಮ್ಮದು ಧ್ವನಿ ನಮ್ಮದು

ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರು ಎಚ್ಎಎಲ್, ಕಾರವಾರ, ಹೊಸಕೋಟೆ, ತಿಪಟೂರು, ಗೋಣಿಕೊಪ್ಪಲು, ಕೋಟ, ಹೊನ್ನಾವರ, ಮಾಲೂರು, ಅಂಕೋಲಾ, ಮಂಕಿ, ಬೆಳ್ತಂಗಡಿ, ಹುಣಸೂರು, ಕದ್ರಾ, ಬೇಲಿಕೇರಿ, ಪುತ್ತೂರು, ಕುಂದಾಪುರ, ಜ್ಞಾನಭಾರತಿ, ದೊಡ್ಡಬಳ್ಳಾಪುರ, ಟಿ ನರಸೀಪುರ, ಸರಗೂರು, ಭಾಗಮಂಡಲದಲ್ಲಿ ಮಳೆಯಾಗಿದೆ.

error: Content is protected !!