ಕೂಗು ನಿಮ್ಮದು ಧ್ವನಿ ನಮ್ಮದು

ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 19ರವರೆಗೂ ಮಳೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಜೂನ್ 19ರವರೆಗೆ ಮಳೆಯಾಗಲಿದೆ.

ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕೆಲವು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್ ಹಾಗೂ ಕರಾವಳಿಯಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 40.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಪುತ್ತೂರು, ಮಂಗಳೂರು, ಮಾಣಿ, ಕದ್ರಾ, ಕೋಟ, ಪಣಂಬೂರು, ಉಪ್ಪಿನಂಗಡಿ, ಧರ್ಮಸ್ಥಳ, ಅಂಕೋಲಾ, ಗೋಕರ್ಣ, ಕುಮಟಾ, ಕುಂದಾಪುರ, ಭಾಗಮಂಡಲ, ದೊಡ್ಡಬಳ್ಳಾಪುರ, ಬೇಲೂರು, ತಿಪಟೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆ ಮಳೆಯಾಗಲಿದೆ. ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ ಐದು ದಿನ ಬೆಂಗಳೂರಿನ ವಿವಿಧೆಡೆ ಸುಮಾರು 05 ರಿಂದ 10 ಮಿಲಿ ಮೀಟರ್‌ನಷ್ಟು ಮಳೆ ಬರಬಹುದು. ಈ ವಾರ ಪೂರ್ತಿ ಚಂಡಮಾರುತದ ಹಾವಳಿ ಕಂಡು ಬರುವ ಸಾಧ್ಯತೆ ಇದೆ. ಹೀಗಾಗಿ ನಿತ್ಯ ಸಂಜೆ ಮಳೆ ಬರಲಿದೆ. ಬಿಪರ್‌ಜಾಯ್ ಚಂಡಮಾರುತ ತೀವ್ರತೆ ಕಡಿಮೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಮಳೆ ಬೆಳಗ್ಗೆಯಿಂದ ಇಡೀ ದಿನ ಆವರಿಸುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ

error: Content is protected !!