ಕೂಗು ನಿಮ್ಮದು ಧ್ವನಿ ನಮ್ಮದು

ಹಿರಿಯ ನಟ ರಾಜೇಶ್ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟ ರಾಜೇಶ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಾಜೇಶ್ ಆರೋಗ್ಯ ಸ್ಥಿತಿ 2 ದಿನಗಳ ಹಿಂದೆಯೇ ಬಹಳ ಗಂಭೀರವಾಗಿತ್ತು. ಸದ್ಯ ವೈದ್ಯರು ಇಂದಿನ ಆರೊಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಇವತ್ತು ರಾಜೇಶ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ರಾಜೇಶ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

82 ವರ್ಷ ವಯಸ್ಸಿನ ರಾಜೇಶ್, ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹಾಗಾಗಿ ಕಸ್ತೂರಿ ಬಾ ನಗರದ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಾಗಿ, ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತಿಚೆಗೆ ಪತ್ನಿಯನ್ನು ಕಳೆದುಕೊಂಡಿರುವ ರಾಜೇಶ್ ಅವರಿಗೆ ಐದು ಜನ ಮಕ್ಕಳಿದ್ದಾರೆ.

error: Content is protected !!