ಕೂಗು ನಿಮ್ಮದು ಧ್ವನಿ ನಮ್ಮದು

ಸುಳ್ಯದಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ೨೨ ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು,
ಮಂಗಳವಾರ ಸಾಯಂಕಾಲ ೭ ಗಂಟೆ ಸರಿಸುಮಾರಿಗೆ ಕೆಲಸ ಮುಗಿಸಿ ಬಸ್ ನಲ್ಲಿ ಬಂದು ಯುವತಿ ಇಳಿದಿದ್ದಳು. ಬಸ್ ನಿಲ್ದಾಣದಿಂದ ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಸ್ಥಳೀಯ ನಿವಾಸಿ ಆಕೆಯ ಮೈ ಮೇಲೆ ಕೈ ಹಾಕಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಅಲ್ಲದೆ ಯುವತಿಯನ್ನು ಏಕಾಏಕಿ ಹೊತ್ತುಕೊಂಡು ಹೋಗಲು ಪ್ರಯತ್ನಿಸಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಯುವತಿಯನ್ನು ರಕ್ಷಿಣೆ ಮಾಡಿ, ಆರೋಪಿಯನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.

error: Content is protected !!