ಅಕ್ಕಿ ಬೆಲೆ ಏರಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ, ಕರೆಂಟ್ ಬೆಲೆ ಏರಿಕೆ ಹಿನ್ನೆಲೆ ಅಕ್ಕಿ ಬೆಲೆ ಏರಿಸಲು ಕರ್ನಾಟಕ ರೈಸ್ ಮಿಲ್ಲರ್ಸ್ ಫೆಡರೇಷನ್ ಚಿಂತನೆ ನಡೆಸುತ್ತಿದೆ. 5 ರಿಂದ 10 ರುಪಾಯಿ ಏರಿಕೆ ಮಾಡಲು ಚಿಂತಿಸಿದೆ.
ಕರೆಂಟ್ ಬಿಲ್ ಹೆಚ್ಚಳದಿಂದಾಗಿ ಮಿಲ್ಗಳಿಗೆ ಭಾರಿ ಹೊಡೆತ ಬೀಳುತ್ತಿದೆ. ಎಪಿಎಂಸಿ ಟ್ಯಾಕ್ಸ್ ಕೂಡ ಹೊರೆಯಾಗುತ್ತಿದೆ. ಮಳೆ ಇಲ್ಲದೇ ಇರುವ ಕಾರಣ ಭತ್ತ ಸಿಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆ ಮಾಡಲು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಚಿಂತನೆ ನಡೆಸುತ್ತಿದೆ.