ಕೂಗು ನಿಮ್ಮದು ಧ್ವನಿ ನಮ್ಮದು

ಜೆಡಿಎಸ್ ಅಭ್ಯರ್ಥಿ ಇದ್ದರೂ ಕಾಂಗ್ರೆಸ್ಗೆ ಬೆಂಬಲಿಸಿ ಎಂದ ಹೆಚ್ಡಿ ಕುಮಾರಸ್ವಾಮಿ ಆಪ್ತ, ಜೆಡಿಎಸ್ ಮುಖಂಡ ಎಸ್ ಎಲ್ ಭೋಜೇಗೌಡ

ಚಿಕ್ಕಮಗಳೂರು: ಹೆಚ್ಡಿ ಕುಮಾರಸ್ವಾಮಿ ಆಪ್ತ, ಜೆಡಿಎಸ್ ಮುಖಂಡ ಎಸ್ ಎಲ್ ಭೋಜೇಗೌಡ ಅವರ ವಿಡಿಯೋವೊಂದು ವೈರಲ್ ಆಗುತ್ತಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ ಎನ್ನಲಾದ ಭೋಜೇಗೌಡರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯನಿಗೆ ಮತ ಹಾಕುವಂತೆ ಜೆಡಿಎಸ್ ಮುಖಂಡ ತನ್ನ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಜೆಡಿಎಸ್ ಕಾರ್ಯಕರ್ತರೊಂದಿಗೆ ಮಾತನಾಡಿರುವ ವಿಡಿಯೋ ಟಿವಿ9ಗೂ ಲಭ್ಯವಾಗಿದೆ. ಜೆಡಿಎಸ್ ಅಭ್ಯರ್ಥಿ ತಿಮ್ಮಶೆಟ್ಟಿ ಕಣದಲ್ಲಿದ್ರು ಬೋಜೇಗೌಡ ಅವರು ಕಾಂಗ್ರೆಸ್​ಗೆ ಬೆಂಬಲ ಸೂಚಿಸಿದ್ದಾರೆ. ಬೋಜೇಗೌಡ ಕಾರ್ಯಕರ್ತರ ಜೊತೆ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು ಶಾಸಕ ಸಿ.ಟಿ. ರವಿ ಸೋಲಿಸಲು ಕಾಂಗ್ರೆಸ್, ಜೆಡಿಎಸ್ ಒಂದಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ

error: Content is protected !!