ಕೂಗು ನಿಮ್ಮದು ಧ್ವನಿ ನಮ್ಮದು

ಅನುದಾನಿತ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಿಂದ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಪ್ರಾರಂಭಿಸಲು!ವಿಧಾನ ಪರಿಷತ್ ಸದಸ್ಯ,ಎಸ್.ವಿ. ಸಂಕನೂರ ಒತ್ತಾಯ

ಧಾರವಾಡ: ರಾಜ್ಯದಲ್ಲಿ ಖಾಸಗಿ ಅನುದಾನಿತ ಪ್ರೌಢ ಹಾಗೂ ಪದವಿ ಪೂರ್ವಕಾಲೇಜುಗಳಲ್ಲಿ 31-12-2015 ರ ಪೂರ್ವದಲ್ಲಿ ನಿಧನ, ನಿವೃತ್ತಿ ಹಾಗೂ ರಾಜಿನಾಮೆಯಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಕೊವಿಡ್ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ತಡೆಯಾಜ್ಞೆ ನೀಡಿದ್ದನ್ನು ಹಿಂಪಡೆದು ನೇಮಕಾತಿ ಪ್ರಕ್ರಿಯೆ ಪುನಃ ಪ್ರಾರಂಭಿಸುವಂತೆ ಸೂಕ್ತ ಆದೇಶ ಹೊರಡಿಸಲು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರನ್ನು ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ ಅವರು ಒತ್ತಾಯಿಸಿದ್ದಾರೆ.

ರಾಜ್ಯದ ಅನುದಾನಿತ ಪ್ರೌಢ ಮತ್ತು ಪದವಿ ಪೂರ್ವ ಸುಮಾರು 500 ಕ್ಕೂ ಹೆಚ್ಚು ಶಾಲೆ ಕಾಲೇಜುಗಳಲ್ಲಿ ಕಳೆದ ಒಂದು ದಶಕದಿಂದ ವೇತನವಿಲ್ಲದೇ ಖಾಲಿ ಇರುವ ಹುದ್ದೆಗಳಲ್ಲಿ ಆಶಾಭಾವನೆಯಿಂದ ಕೆಲಸ ನಿರ್ವಹಿಸುತ್ತಿರುವರು. ಈ ಒಂದು ಸಿಬ್ಬಂದಿ ನೇಮಕಾತಿಗೆ ಅನುಮೋದನೆ ಇಲ್ಲದೇ ವೇತನವಿಲ್ಲದೇ ಸಾಕಷ್ಟು ಆರ್ಥಿಕ ಸಂಕಷ್ಟದಲ್ಲಿ ಬದುಕನ್ನು ಸಾಗಿಸುತ್ತಿರುವರು.
ಆದ್ದರಿಂದ ರಾಜ್ಯದ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ತಡೆಯಾಜ್ಞೆ ನೀಡಿದ್ದನ್ನು ದಿನಾಂಕ 23-06-2021 ರಂದು ಆರ್ಥಿಕ ಇಲಾಖೆ ಹಿಂಪಡೆದಂತೆ ಪ್ರೌಢ ಹಾಗೂ ಪದವಿ ಕಾಲೇಜುಗಳ ನೇಮಕಾತಿಗೆ ನೀಡಿದ ತಡೆಯಾಜ್ಞೆನ್ನು ಹಿಂಪಡೆದು ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಕ್ರಮ ಕೈಗೊಳ್ಳಲು ಸಚಿವರನ್ನು ಒತ್ತಾಯಿಸಿದ್ದಾರೆ.

error: Content is protected !!