ಕೂಗು ನಿಮ್ಮದು ಧ್ವನಿ ನಮ್ಮದು

ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆ ಈ ಎರಡು ಪಕ್ಷಗಳು

ದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಉದ್ಘಾಟಿಸಬಾರದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅನಾವರಣಗೊಳಿಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಅಷ್ಟೇ ಅಲ್ಲದೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಇದರ ನಡುವೆಯೇ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲು ಬೇರೆ ಎರಡು ಪಕ್ಷಗಳು ಸಮ್ಮತಿ ಕೂಡ ಸೂಚಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಸಂಸದರು ಭಾಗವಹಿಸುವುದಾಗಿ ಘೋಷಿಸಿದ ಬಿಜೆಡಿ ವಕ್ತಾರ ಲೆನಿನ್ ಮೊಹಂತಿ ಪತ್ರದಲ್ಲಿ, ಪ್ರಜಾಪ್ರಭುತ್ವದ ಸಂಕೇತವಾದ ಸಂಸತ್ತು ರಾಜಕೀಯಕ್ಕಿಂತ ಮೇಲಿದ್ದು, ಅದರ ಅಧಿಕಾರ ಮತ್ತು ಎತ್ತರವನ್ನು ಯಾವಾಗಲೂ ಕಾಪಾಡಬೇಕು ಎಂದು ಪಕ್ಷವು ನಂಬುತ್ತದೆ ಎಂದು ಹೇಳಿದ್ದಾರೆ.

ಬಿಜು ಜನತಾ ದಳ ಮತ್ತು ವೈಎಸ್‌ಆರ್‌ಸಿಪಿ ಎರಡೂ ಪಕ್ಷಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರ್ಧಾರವನ್ನು ಬುಧವಾರ ಪ್ರಕಟಿಸಿದವು. ನೂತನ ಸಂಸತ್ತಿನ ಉದ್ಘಾಟನೆ ಮೇ 28 ರಂದು ನಡೆಯಲಿದೆ. ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೇರಿದಂತೆ 19 ವಿರೋಧ ಪಕ್ಷಗಳು ಬುಧವಾರ ಜಂಟಿ ಹೇಳಿಕೆ ನೀಡಿ ಬಹಿಷ್ಕಾರವನ್ನು ಘೋಷಿಸಿವೆ ಮತ್ತು ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಮೇಲೆ ಗಂಭೀರ ಅವಮಾನ ಮತ್ತು ನೇರ ಆಕ್ರಮಣ ಎಂದು ಕರೆದಿವೆ.

ಅಧ್ಯಕ್ಷೆ ದ್ರೌಪದಿ ಮುರ್ಮು ಅದನ್ನು ಅನಾವರಣಗೊಳಿಸುತ್ತಿಲ್ಲ, ಇದು ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ಅವರು ವಾಗ್ದಾಳಿ ನಡೆಸಿದ್ದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಒಡಿಶಾದ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಪಕ್ಷ ಅಧಿಕೃತವಾಗಿ ಹೇಳಿಕೆ ನೀಡಿದೆ.

ಅಂತಹ ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಬಹುದು. ಆದ್ದರಿಂದ ನೂತನ ಸಂಸತ್ ಉದ್ಘಾಟನೆಯ ಮಹತ್ವದ ಸಂದರ್ಭದಲ್ಲಿ ಭಾಗವಹಿಸುವುದಾಗಿ ಪಕ್ಷದ ರಾಷ್ಟ್ರೀಯ ವಕ್ತಾರ ಡಾ. ಎಸ್. ಪಾತ್ರಾ ಪತ್ರದ ಮೂಲಕ ತಿಳಿಸಿದ್ದಾರೆ.

ಬಿಜೆಡಿ ಪಕ್ಷವನ್ನು ಈ ಕೂಟಕ್ಕೆ ಸೆಳೆಯುವ ನಿಟ್ಟಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿ ಮಾತುಕತೆ ಕೂಡಾ ನಡೆಸಿದ್ದರು.

ಆದರೆ, ನವೀನ್ ಪಟ್ನಾಯಕ್ ಯಾವುದೇ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಈಗ ಸಂಸತ್ ನೂತನ ಭವನ ಉದ್ಘಾಟನೆ ವಿಷಯದಲ್ಲೂ ಅವರು ಬಿಜೆಪಿ ಬೆಂಬಲಿಸುವ ಮೂಲಕ ವಿಪಕ್ಷಗಳ ಮೈತ್ರಿಕೂಟ ರಚನೆಯಿಂದ ದೂರ ಉಳಿಯುವ ಸುಳಿವು ನೀಡಿದ್ದಾರೆ.

error: Content is protected !!