ಕೂಗು ನಿಮ್ಮದು ಧ್ವನಿ ನಮ್ಮದು

ಮುಸ್ಲಿಂ ಗೂಂಡಾಗಳಿಂದ ಕೊಲೆ ಎಂಬ ಈಶ್ವರಪ್ಪ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ

ಚಿಕ್ಕೋಡಿ: ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳಿಂದ ಹತ್ಯೆ ಆಗಿದೆ ಎಂಬ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಖಂಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಈ ಘಟನೆ ಇವರೇ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ನಡೆಸಲೆಂದೇ ಪೊಲೀಸ್ ಇಲಾಖೆ ಇದೆ. ಪೊಲೀಸರು ತನಿಖೆ ಮಾಡಲಿ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಎಂದು ನೀವೇ ನೋಡುತ್ತಿದ್ದೀರಾ. ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಜನ ಉತ್ತರ ಕೊಡುತ್ತಾರೆ. ಸದ್ಯ ಯಾರು ಈ ಘಟನೆಯನ್ನು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಶಿವಮೊಗ್ಗ ಕೊಲೆ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪನವರು, ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ.

ಮುಸಲ್ಮಾನ ಗೂಂಡಾಗಳಿಂದ ಈ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದರು. ಅಲ್ಲದೇ ಕೇಸರಿ ಶಾಲು ಹಂಚಿದ್ದಾರೆ. ರಾಷ್ಟ್ರಧ್ವಜ ತೆಗೆದು ಭಗವಾಧ್ವಜ ಹಾರಿಸಿದ್ದಾರೆ ಎಂಬಂತಹ ಡಿಕೆಶಿ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ರು.

error: Content is protected !!