ನಿಪ್ಪಾಣಿ: ಏಪ್ರಿಲ್ 25 ರಂದು ನಿಪ್ಪಾಣಿಯಲ್ಲಿ ಬೃಹತ್ ಮಹಿಳಾ ಸಮಾವೇಶವನ್ನು ಆಯೋಜಿಸಲಾಗಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಹಾಗೂ ಕೇಂದ್ರ ಶಿಕ್ಷಣ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ಪಾಲ್ಗೊಳ್ಳಲಿದ್ದಾರೆ ಎಂದು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಭಾವರಿ ಖಾಂಡಕೆ ಹಾಗೂ ಗ್ರಾಮೀಣ ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜನಿ ಜಮದಾಡೆ ತಿಳಿಸಿದ್ದಾರೆ.
ನಿಪ್ಪಾಣಿ ವಿಧಾನಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವಿಗೆ ಸಿದ್ದರಾಗಿರುವ ಸಚಿವೆ ಶಶಿಕಲಾ ಅ. ಜೊಲ್ಲೆ ಅವರ ಪರ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ವಿ.ಎಸ್.ಎಂ ಕಾಲೇಜು ಮೈದಾನದಲ್ಲಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ. ಸಂಜೆ 4 ಗಂಟೆಗೆ ಪ್ರಾರಂಭವಾಗಲಿರುವ ಈ ಸಭೆಯಲ್ಲಿ ರಾಜ್ಯದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ.
ನಿಪ್ಪಾಣಿ ನಗರದ ವಿದ್ಯಾ ಸಂವರ್ಧಕ ಮಂಡಳದ ಮೈದಾನದಲ್ಲಿ ನಡೆಯುವ ಈ ಸಭೆಯಲ್ಲಿ ವಿಧಾನಸಭಾ ಕ್ಷೇತ್ರದ ಮಹಿಳೆಯರು ಭಾಗವಹಿಸಲಿದ್ದಾರೆ.
ಈ ವೇಳೆ ಜಿಲ್ಲೆಯ ಗಣ್ಯರು ಆಗಮಿಸಲಿದ್ದಾರೆ ಈ ಸಭೆಗೆ ಕ್ಷೇತ್ರದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಭಾವರಿ ಖಾಂಡಕೆ ಹಾಗೂ ಗ್ರಾಮೀಣ ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜನಿ ಜಮದಾಡೆ ಮನವಿ ಮಾಡಿದ್ದಾರೆ.