ತುಮಕೂರು: ತ್ರಿವಿಧ ದಾಸೋಹಿ, ಶತಾಯುಷಿ ಶಿವಕುಮಾರ ಶ್ರೀಗಳು ಶಿವೈಕ್ಯರಾಗಿ ಇವತ್ತಿಗೆ 3 ವರ್ಷ. ಕೋವಿಡ್ ಕಾರಣಕ್ಕಾಗಿ ಅತ್ಯಂತ ಸರಳವಾಗಿ ಲಿಂಗೈಕ್ಯ ಶ್ರೀಗಳ ಸ್ಮರಣೆ ಮಾಡಲು ಶ್ರೀಮಠದಲ್ಲಿ ಸಿದ್ಧತೆ ನಡೆಸಿದ್ದಾರೆ. ಸಿದ್ದಲಿಂಗ ಸ್ವಾಮಿಗಳಿಂದ ಹಳೇ ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.
ತದನಂತರ ಮುಂಜಾನೆ ಪ್ರಾತಃಕಾಲದಲ್ಲಿ ಶ್ರೀಗಳ ಗದ್ದಿಗೆಗೆ ಅಭಿಷೇಕ, ಪೂಜೆ, ಮಹಾ ಮಂಗಳಾರತಿ ನಡೆಯಿತು. ಈ ಪೂಜೆ ಹೊರತು ಪಡಿಸಿದರೆ ಯಾವುದೇ ವೇದಿಕೆ ಕಾರ್ಯಕ್ರಮ, ಉತ್ಸವ, ಮೆರವಣಿಗೆ ಇರೋದಿಲ್ಲ. ಇತ್ತ ಈ ದಿನವನ್ನು ಸರ್ಕಾರ ದಾಸೋಹ ದಿನ ಎಂದು ಆಚರಣೆ ಮಾಡುವಂತೆ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇವತ್ತು ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದಿಗೆಯ ದರ್ಶನ ಪಡೆದು ದೀಪ ಬೆಳಗಿಸಿ ಸಾಂಕೇತಿಕ ದಾಸೋಹ ದಿನವನ್ನು ಉದ್ಘಾಟನೆ ಮಾಡಿದ್ರು.