ಕೂಗು ನಿಮ್ಮದು ಧ್ವನಿ ನಮ್ಮದು

ಬಸವರಾಜ್ ಬೊಮ್ಮಾಯಿ ರಬ್ಬರ್‌ ಸ್ಟಾಂಪ್ ಸಿಎಂ: ಸಿದ್ದರಾಮಯ್ಯ

ಹುಬ್ಬಳ್ಳಿ: ನೂತನವಾಗಿ ಮುಖ್ಯಮಂತ್ರಿ ಆಗಿರುವ ಬೊಮ್ಮಾಯಿಯವರು ರಬ್ಬರ್‌ ಸ್ಟಾಂಪ್ ಸಿಎಂ ಆಗಿದ್ದಾರೆ. BJP ಸರ್ಕಾರ ಬದಲಾಗಿಲ್ಲ. ಬೊಮ್ಮಾಯಿ ರಬ್ಬರ್‌ ಸ್ಟಾಂಪ್ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಇನ್ನೂ ಹುಬ್ಬಳ್ಳಿಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಕಾಂಗ್ರೆಸ್ ಸಮಾವೇಶದಲ್ಲಿ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯನವರು ಮಾತನಾಡಿದ್ದಾರೆ.

ಇನ್ನೂ ಹಿಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಸಚಿವರಾಗಿದ್ರು, ಇವಾಗ ಮುಖ್ಯಮಂತ್ರಿ ಆಗಿದ್ದಾರೆ. ಆದ್ರೆ ಭ್ರಷ್ಟಾಚಾರ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಇನ್ನೂ ನಾವೇನೂ ಅವರನ್ನ ರಬ್ಬರ್‌ ಸ್ಟಾಂಪ್ ಎಂದು ಕರೆದಿಲ್ಲ ಅವರೇ ನಾನು ರಬ್ಬರ್‌ ಸ್ಟಾಂಪ್ ಮುಖ್ಯಮಂತ್ರಿ ಎಂದು ಹೇಳಿಕೊಂಡಿರುವುದರಿಂದ ಅವರು ರಬ್ಬರ್‌ ಸ್ಟಾಂಪ್ ಮುಖ್ಯಮಂತ್ರಿ ಆಗಿದ್ದಾರೆ ಎಂದು ಮುಖ್ಯಮಂತ್ರಿಯನ್ನು ಕುಟುಕಿದ್ದಾರೆ.

ನಾನು ಸಂಯಮ ಮೀರಿ ಮಾತನಾಡಿಲ್ಲ. ಶಾಂತವಾಗಿ ಸಹನೆಯಿಂದ ಸಮಾಧಾನದಿಂದಲೇ ಇದ್ದೇನೆ ಎಂದು ಸಿದ್ದರಾಮಯ್ಯನವರು ಬಿ‌ಎಸ್‍.ವೈನವಿರಿಗೆ ಟಾಂಗ್ ನೀಡಿದ್ದಾರೆ. ಇನ್ನೂ
ರಾಜ್ಯದಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಬಿಜೆಪಿ ಯವರು ಅಧಿಕಾರಕ್ಕೆ ಓಡಾಡ್ತಾ ಇದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಟಾ ಚಾರದ ಪ್ರವಾಸವನ್ನು ಮಾಡಿದ್ದಾರೆ. ಉತ್ತರ ಕನ್ನಡಕ್ಕೆ ಅಷ್ಟೇ ಹೋಗಿ ಬಂದು ,ಮತ್ತೆ ದೆಹಲಿಗೆ ಹೋಗಿ ಕುಳಿತಿದ್ದಾರೆ. ಇನ್ನೂ BJP ಯವರು ದೆಹಲಿಗೆ ಹೋಗಿ ಕುಳಿತು ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

ಇನ್ನೂ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿ ಆಗಿದೆ. ಮುಖ್ಯಮಂತ್ರಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನನ ಹೆಚ್ಚಳ ಮಾಡಿದ್ದಾರೆ. ಜೊತೆಗೆ ರೈತರ ಮಕ್ಕಳಿಗೆ ಯೋಜನೆ ಘೋಷಿಸಿದ್ದಾರೆ. ಆದ್ರೆ ಇದಕ್ಕೆಲ್ಲಾ ಹಣ ಎಲ್ಲಿದೆ ಎಂದು ಪ್ರಶ್ನೆ ಮಾಡಿದರು ಸಿದ್ದರಾಮಯ್ಯ, ಇನ್ನೂ ಸರ್ಕಾರಕ್ಕೆ ನ್ಯಾಯಯುತವಾಗಿ ಬರಬೇಕಾದ ಹಣವನ್ನು ಕೇಂದ್ರದಿಂದ ಪಡೆದುಕೊಂಡು ಬರಬೇಕೆಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಲಹೆ ನೀಡಿದ್ರು.

error: Content is protected !!