ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಇಂದು ಮತ್ತೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ಫೋಟೋ ವಿವಾದಕ್ಕೆ ಸಂಬಂಧಿಸಿದಂತೆ ಸಾವರ್ಕರ್ ವಿರುದ್ಧ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಬಗ್ಗೆ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ನಿನ್ನೆಯಿಂದ ಗೋ ಬ್ಯಾಕ್ ಸಿದ್ದರಾಮಯ್ಯ ಅಭಿಯಾನ ಆರಂಭಿಸಿರುವ ಹಿಂದೂ ಕಾರ್ಯಕರ್ತರು, ಇವತ್ತು ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.
ಇನ್ನು ಹಿಂದೂ ವಿರೋಧಿ ಸಿದ್ದರಾಮಯ್ಯ ಈ ಪುಣ್ಯ ಭೂಮಿಗೆ ಬರುವುದು ಬೇಡ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.