ಕೂಗು ನಿಮ್ಮದು ಧ್ವನಿ ನಮ್ಮದು

ಮೊಟ್ಟೆ ಎಸೆತ ಪ್ರಕರಣ, ಬಿಜೆಪಿ ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ನಡೆಸುತ್ತಿದೆ. ಸಿದ್ದರಾಮಯ್ಯ

ಬೆಂಗಳೂರು: ಕೊಡಗು ಪ್ರವಾಸದ ವೇಳೆ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತನೆಂಬ ಬಿಜೆಪಿ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ. ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

‘ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ’ ಕೂಡಾ @BJP4Karnataka ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ. 2/3 ಆಪರೇಷನ್ ಕಮಲ’ ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ ‘ಆಪರೇಷನ್ ಕಮಲ ಕೂಡ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ. ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ?’ ಎಂದು ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಕಾಂಗ್ರೆಸ್ ಅಕ್ಷರಶಃ ಬಾಣಲೆಯಿಂದ ಬೆಂಕಿಗೆ ಬಿದ್ದಿದೆ.

ಇನ್ನು ಇದೇ ವಿಚಾರವಾಗಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. #ಹಿಂದೂವಿರೋಧಿಸಿದ್ದರಾಮಯ್ಯ ಹ್ಯಾಶ್ ಬಳಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ಪಕ್ಷ ಈಗ ಅಕ್ಷರಶಃ ಬಾಣಲೆಯಿಂದ ಬೆಂಕಿಗೆ ಬಿದ್ದಿದೆ!’ ಎಂದು ಕುಟುಕಿದೆ. ‘ಕಾಂಗ್ರೆಸ್ ಕಾರ್ಯಕರ್ತರೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಹೇಳಿಕೆಗಳ ವಿರುದ್ಧ ಸಿಡಿದೆದ್ದಿದ್ದಾರೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದು ನಾನೇ ಎಂದು ಸ್ವತಃ ಕಾಂಗ್ರೆಸ್ ಕಾರ್ಯಕರ್ತನೇ ಹೇಳಿಕೊಂಡಿದ್ದಾನೆ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

ನಮ್ಮ ಕಾರ್ಯಕರ್ತರು ಬೀದಿಗೆ ಬಂದರೆ ನಿಮಗೆ ಓಡಾಡಲೂ ಸಾಧ್ಯವಿಲ್ಲ ಎಂದು ಬೆದರಿಸುತ್ತಿರುವ ಕಾಂಗ್ರೆಸ್ ನಾಯಕರೇ, ಹಿಂದೂಗಳನ್ನು ವಿರೋಧಿಸುತ್ತಿರುವ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ಬೀದಿಗೆ ಇಳಿದಿದ್ದಾರೆ. ಹಿಂದೂ ವಿರೋಧಿ ಚಿಂತನೆ ನಿಲ್ಲಿಸಿ, ಬೀದಿಯಲ್ಲಿ ಓಡಾಡಲು ಕಷ್ಟವಾಗಬಹುದು!’ ಎಂದು ಬಿಜೆಪಿ ತಿರುಗೇಟು ನೀಡಿದೆ

error: Content is protected !!