ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೆಂಗಳೂರಲ್ಲಿಂದು ಉಗ್ರ ಸ್ವರೂಪದ ಹೋರಾಟ ನಡೆಸಿತು. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಮನೆಯಲ್ಲಿ ಸಿಕ್ಕ ಕೋಟಿಗಟ್ಟಲೆ ಅಕ್ರಮ ಹಣದ ಹೊಣೆ ಹೊತ್ತು ಮುಖ್ಯಮಂತ್ರಿ ಬಸವಾರಾಜ್ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಎಲ್ಲ ಪ್ರಮುಖ ನಾಯಕರು ಮುಖ್ಯಮಂತ್ರಿಗಳ ನಿವಾಸದೆದುರು ದಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳ ಮನೆ ಮುಂದೆ ಚಕ್ಕಂಬಕ್ಕಳ ಹಾಕಿ ಕೂತಿರುವುದನ್ನು ನೋಡಬಹುದು. ಪೊಲೀಸರು ಸಿದ್ದರಾಮಯ್ಯನವರನ್ನು ಅಲ್ಲಿಂದ ಎಬ್ಬಿಸಿ ಕರೆದೊಯ್ಯಲು ಹರಸಾಹಸ ಪಡಬೇಕಾಯಿತು