ಬೆಂಗಳೂರು: ಜಗದೀಶ್ ಶೆಟ್ಟರ್ ಅವರನ್ನು ಆತ್ಮೀಯವಾಗಿ ಕಾಂಗ್ರೆಸ್ಗೆ ಸ್ವಾಗತ ಮಾಡುತ್ತೇನೆ. ಶೆಟ್ಟರ್ ಮುಖ್ಯಮಂತ್ರಿ ಆಗಿದ್ದಾಗ, ನಾನು ವಿಪಕ್ಷ ನಾಯಕನಾಗಿದ್ದೆ. ಸ್ವಾರ್ಥಕ್ಕಾಗಿ ಶೆಟ್ಟರ್ರನ್ನು ಬಲಿಕೊಡುವ ಕೆಲಸ ಮಾಡಲಾಗಿದೆ.
ಶೆಟ್ಟರ್ ಉತ್ತರ ಕರ್ನಾಟಕಕ್ಕೆ ಅಷ್ಟೇ ಸೀಮಿತವಾದ ನಾಯಕರಲ್ಲ. ಜಗದೀಶ್ ಶೆಟ್ಟರ್ ಇಡೀ ರಾಜ್ಯದ ನಾಯಕರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ