ಕೂಗು ನಿಮ್ಮದು ಧ್ವನಿ ನಮ್ಮದು

ವಾಕ್ಸಿನ್ ಹಂಚಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರ್ಕಾರ ವಿಫಲ! ಸಿದ್ದರಾಮಯ್ಯ

ಮೈಸೂರು: ವಾಕ್ಸಿನ್ ವಿಚಾರದಲ್ಲಿ ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ. ವಾಕ್ಸಿನ್ ಸ್ಟಾಕ್ ಇದ್ದರೆ ಜನ ಯಾಕೆ ವಾಕ್ಸಿನ್ಗಾಗಿ ಕ್ಯೂ ನಿಲ್ಲುತ್ತಿದ್ದರು. ವಾಕ್ಸಿನ್ಗಾಗಿ ಜನರು ಪರದಾಡುತ್ತಿದ್ದಾರೆ. ಸರ್ಕಾರಕ್ಕೆ ವಾಕ್ಸಿನ್ ಪೂರೈಸಲು ಆಗುತ್ತಿಲ್ಲ. ಸರ್ಕಾರದಲ್ಲಿ ಸಚಿವರ ನಡುವೆ ಸಮನ್ವಯತೆ ಇಲ್ಲ. ವಾಕ್ಸಿನ್ ಹಂಚಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರ್ಕಾರ ವಿಫಲವಾಗಿವೆ.

ಸರಿಯಾದ ಪ್ಲ್ಯಾನ್ ಮಾಡದೆ ವಾಕ್ಸಿನ್ಗಾಗಿ ಜನ ಅಲೆಯುವಂತೆ ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇವತ್ತಿನ ಪರಿಸ್ಥಿತಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಬಾರದು. ಪಿಯುಸಿ ಪರೀಕ್ಷೆ ರದ್ದಾದ ಮೇಲೆ ಎಸ್ಎಸ್ಎಲ್ಸಿ ಪರೀಕ್ಷೆ ಯಾಕೆ ಮಾಡುತ್ತಿದ್ದೀರಿ. ಪರೀಕ್ಷೆ ನಡೆಸುವ ಬಗ್ಗೆ ಆರೋಗ್ಯ ಸಚಿವರೇ ವಿರೋಧ ಮಾಡಿದ್ದಾರೆ. ಆದರು ಯಾಕೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುತ್ತಿದ್ದಾರೆ ಯಾಕೆ ಗೊತ್ತಿಲ್ಲ ಎಂದು ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನೆ ಮಾಡಿದ್ದಾರೆ.

ಇನ್ನು ತುರ್ತಾಗಿ ರಾಜ್ಯದಲ್ಲಿ ವಿಧಾನಸಭಾ ಅಧಿವೇಶನ ಕರೆಯಬೇಕು. ಇಂತಹ ತುರ್ತು ಪರಿಸ್ಥಿತಿಯಲ್ಲಿ ಅಧಿವೇಶನ ಕರೆಯದೆ. ಇನ್ನು ಯಾವ ಸಂದರ್ಭದಲ್ಲಿ ಅಧಿವೇಶನ ಕರೆಯುತ್ತಾರೆ. ವಿರೋಧ ಪಕ್ಷಗಳನ್ನ ಎದುರಿಸಲು ಆಡಳಿತ ಪಕ್ಷಕ್ಕೆ ಭಯವಿದೆ. ಈಗಾಗಿಯೇ ಅಧಿವೇಶನ ಕರೆಯುತ್ತಿಲ್ಲ. ಅಧಿವೇಶನ ಕರೆದರೆ ಸರ್ಕಾರದ ಬಣ್ಣ ಬದಲಾಗುತ್ತೆ ಎಂಬುದು ಅವರಿಗೆ ಗೊತ್ತಿದೆ. ಪ್ರಜಾಪ್ರಭುತ್ವದ ಮೇಲೆ ಅವರಿಗೆ ನಂಬಿಕೆ ಇದ್ದರೆ ಅಧಿವೇಶನ ಕರೆಯಬೇಕು. ನಾನು ಈಗಲು ಆಗ್ರಹ ಮಾಡುತ್ತೇನೆ. ತುರ್ತಾಗಿ ಮುಂಗಾರು ಅಧಿವೇಶನ ಕರೆಯಿರಿ ಎಂದಿದ್ದಾರೆ.

error: Content is protected !!