ಕೂಗು ನಿಮ್ಮದು ಧ್ವನಿ ನಮ್ಮದು

ಸಿದ್ದರಾಮಯ್ಯ ಗಂಟಲಿನಿಂದ ಮಾತಾಡ್ತಾರೆ. ಹೃದಯದಿಂದಲ್ಲ: ಸಚಿವ ಸೋಮಣ್ಣ

ಚಾಮರಾಜನಗರ: ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಟಲಿನಿಂದ ಮಾತನಾಡುತ್ತಾರೆ ಹೃದಯದಿಂದಲ್ಲ ಎಂದು ಸಚಿವ ಸೋಮಣ್ಣ ಹೇಳಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ. ಸೋಮಣ್ಣ, ಆಲಿಬಾಬಾ ಮತ್ತು 40 ಕಳ್ಳರು ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ತಾನು ಅವರ ಬಗ್ಗೆ ಹೆಚ್ಚು ಮಾತನಾಡಲ್ಲ, ಒಮ್ಮೆ ಶುರುವಾದರೇ ಅದು ಮತ್ತೆಲ್ಲಿಗೋ ಹೋಗುತ್ತದೆ. ನನಗೆ ಈಗಲೂ ಕಾನ್ಫಿಡೆನ್ಸ್ ಇದೆ ಅವರು ಗಂಟಲಿನಿಂದ ಮಾತನಾಡುತ್ತಿದ್ದಾರೆ, ಹೃದಯದಿಂದಲ್ಲ ಎಂದು ಟಾಂಗ್ ಕೊಟ್ಟರು.

ಚುಣಾವಣೆ ಬರುತ್ತೆ-ಹೋಗತ್ತೆ ಅವರು 70 ವರ್ಷ ಅಧಿಕಾರದಲ್ಲಿದ್ದರು, 5-10 ವರ್ಷದಿಂದ ನಾವಿದ್ದೇವೆ ತಡೆದುಕೊಳ್ಳಿ, ಸೆಸ್ಕ್ ನೌಕರರಿಗೆ ಕೊಡುತ್ತಿದ್ದ ಉಚಿತ ವಿದ್ಯುತ್ ನ್ನು ವಾಪಾಸ್ ತೆಗೆದುಕೊಂಡಿದ್ದು ಯಾರು.? ಅವರ ಭರವಸೆಗಳು ಭರವಸೆಗಳಾಗಿಯೇ ಉಳಿಯುತ್ತದೆ. ಅವರದೇ ಸರ್ಕಾರ ರಾಜಾಸ್ಥಾನದಲ್ಲಿದೆ. ಮೊದಲು ಅಲ್ಲಿ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಿ ಎಂದು ಸವಾಲ್ ಹಾಕಿದರು.

ಪಕ್ಷ ಹೇಳಿದ ಕಡೆ ಸ್ಪರ್ಧಿಸುವೆ:
ಚಾಮರಾಜನಗರದಲ್ಲಿ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಚಲಾವಣೆಯಲ್ಲಿರುವ ನಾಣ್ಯ, ರಾಜ್ಯದಲ್ಲಿ ನನಗೇ ಎಂಬ 25-30 ಕ್ಷೇತ್ರ ಇದೆ, ಬಿಜೆಪಿ ಗೆಲ್ಲಲಾಗಲ್ಲ ಎಂಬ ಕ್ಷೇತ್ರಗಳಲ್ಲಿ ಅತಿಹೆಚ್ಚು ಬಹುಮತದಿಂದ ಬಿಜೆಪಿ ಗೆಲ್ಲಿಸಿದ್ದೇನೆ. ನನಗೆ ಗೋವಿಂದರಾಜನಗರ ಕ್ಷೇತ್ರ ಇದೆ. ಪಕ್ಷ ಎಲ್ಲಿ ಹೇಳುತ್ತೇ ಅಲ್ಲಿ ನಿಂತುಕೊಳ್ಳುತ್ತೇನೆ ಎಂದರು.

error: Content is protected !!