ಚಿತ್ರದುರ್ಗ: ಊಟಕ್ಕೆ ಸಾಂಬಾರ್ ಮಾಡಿಲ್ಲಾ ಎಂದು ಆಕ್ರೋಶಗೊಂಡ ಪಾಪಿ ಮಗನೊಬ್ಬ ಕುಡಿದ ಅಮಿಲಿನಲ್ಲಿ ತನ್ನ ತಾಯಿಯನ್ನೆ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದಿದೆ.
ರತ್ನಮ್ಮ (45) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಕಳೆದ 20 ವರ್ಷಗಳ ಹಿಂದೆ ಪಿಲ್ಲಲ ಹಳ್ಳಿ ಗ್ರಾಮದಲ್ಲಿ ಗೋವಿಂದಪ್ಪ ಅವರ ಜೊತೆ ವಿವಾಹ ಆಗಿದ್ದ ರತ್ನಮ್ಮ ಗಂಡನನ್ನ ಬಿಟ್ಟು ಮೊಳಕಾಲ್ಮೂರು ಪಟ್ಟಣದಲ್ಲಿ ಕೂಲಿ ಕೆಲಸ ಮಾಡಿಕೊಂಡು ತನ್ನ 22 ವರ್ಷದ ಲೋಕೇಶ ಎಂಬ ಮಗನೊಂದಿಗೆ ಜೀವನ ಸಾಗಿಸುತ್ತಿದ್ದರು.
ಮಗನೂ ಕೂಡ ಕೂಲಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟಕ್ಕೆ ಬಲಿಯಾಗಿದ್ದನು. ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಕಳೆದ ರಾತ್ರಿ ಕೂಡ ಕುಡಿದು ಮನೆಗ ಬಂದಿದ್ದಾನೆ. ರಾತ್ರಿ ಕೂಲಿ ಕೆಸಲ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು. ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲಾ ಎಂದು ಆಕ್ರೋಶಗೊಂಡು ತಾಯಿಯ ಜೊತೆ ಜಗಳ ಮಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದಾನೆ. ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ತಗುಲಿ ಬಿದ್ದಿದ್ದು, ತಲೆ ಬುರುಡೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ರತ್ನಮ್ಮ ಮೃತಪಟ್ಟಿದ್ದಾಳೆ.
ವಿಷಯ ತಿಳಿದ ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಪರಿಶೀಲನೆ ನಡೆಸಿ ರತ್ನಮ್ಮನ ಮಗ ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಖುದ್ದು ಎಸ್ಪಿ ಜಿ.ರಾಧಿಕಾ ಭೇಟಿ ನೀಡಿದ್ದಾರೆ.