ಕೂಗು ನಿಮ್ಮದು ಧ್ವನಿ ನಮ್ಮದು

SSLC ಪರೀಕ್ಷೆಗೆ ದಿನಾಂಕ ಪೀಕ್ಸ್! ಜುಲೈ 19, 22ರಂದು ಎಸ್ಎಸ್ಎಲ್ಸಿ ಪರೀಕ್ಷೆ;ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ಬೆಂಗಳೂರ: ಕೊರೋನಾದಿಂದಾಗಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ ಜುಲೈ 19 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಈ ವರ್ಷ 2 ದಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದೆ. ಜುಲೈ 19ರಂದು ವಿಜ್ಞಾನ, ಸಮಾಜ ವಿಜ್ಞಾನ, ಗಣಿತ ಪರೀಕ್ಷೆ ನಡೆಯಲಿದೆ. ಜುಲೈ 22ರಂದು ಕನ್ನಡ, ಇಂಗ್ಲಿಷ್, ಹಿಂದಿ ಪರೀಕ್ಷೆಗಳು ನಡೆಯಲಿವೆ.

ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ಜುಲೈ 19 ಮತ್ತು 22 ರಂದು ಪರೀಕ್ಷೆ ನಡೆಯುವ 200 ಮೀ. ಸುತ್ತಳತೆಯಲ್ಲಿ ಸೆಕ್ಷನ್ 144 (ನಿಷೇಧಾಜ್ಞೆ) ಜಾರಿಗೊಳಿಸಲಾಗುವುದು. ಈ ವರ್ಷ ಸರಳವಾದ ಮಾದರಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುವುದು. ಓಎಂಆರ್ ಶೀಟ್ನಲ್ಲಿ ವಿದ್ಯಾರ್ಥಿಗಳು ಉತ್ತರಗಳನ್ನು ಭರ್ತಿ ಮಾಡಬೇಕು. ಜುಲೈ 19 ಮತ್ತು 22ರಂದು ಬೆಳಗ್ಗೆ 10.30ರಿಂದ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ.

10,000 ವಿದ್ಯಾರ್ಥಿಗಳು ತಮ್ಮ ಅಕ್ಕಪಕ್ಕದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜೂನ್ 30 ರಂದು ಎಲ್ಲ ಶಾಲೆಗಳ ಮುಖ್ಯಸ್ಥರಿಗೆ ಹಾಲ್ ಟಿಕೆಟ್ ಕಳುಹಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

error: Content is protected !!