ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ನ TMC ಹಿರಿಯ ನಾಯಕ ಮತ್ತು ಪಶ್ಚಿಮ ಬಂಗಾಳ ಸಚಿವ ಸುಬ್ರತಾ ಮುಖರ್ಜಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸುಬ್ರತಾ ಮುಖರ್ಜಿ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ರು.
75 ವರ್ಷ ವಯಸ್ಸಿನ ಸುಬ್ರತಾ ಮುಖರ್ಜಿ ಅವರು ರಾಜ್ಯ ಪಂಚಾಯತ್ ಸಚಿವರಾಗಿದ್ರು. ಇವರು ಪತ್ನಿಯನ್ನು ಅಗಲಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರ ರಾತ್ರಿ ಹೃದಯ ಸ್ತಂಭನವಾಗಿ ಮೃತಪಟ್ಟಿದ್ದಾರೆ ಎಂದು ಸಚಿವ ಫಿರಾದ್ ಹಕೀಮ್ ತಿಳಿಸಿದ್ರು. ಅವರು ನಮ್ಮೊಂದಿಗಿಲ್ಲ ಎಂದು ನನಗೆ ಇನ್ನೂ ನಂಬಲಾಗುತ್ತಿಲ್ಲ. ಪಕ್ಷಕ್ಕಾಗಿ ಸಮರ್ಪಣ ಮನೋಭಾವದಿಂದ ಕೆಲಸ ಮಾಡಿದವರು ಸುಬ್ರತಾ ಮುಖರ್ಜಿ ಅವರು ವೈಯಕ್ತಿಕವಾಗಿಯೂ ನನಗೆ ನಷ್ಟವಾಗಿದೆ” ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಷಾದ ವ್ಯಕ್ತಪಡಿಸಿದ್ರು.
ಸುಬ್ರತಾ ಮುಖರ್ಜಿ ಪಾರ್ಥಿವ ಶರೀರವನ್ನು ಸರ್ಕಾರದ ರವೀಂದ್ರ ಸದನ ಸಭಾಂಗಣದಲ್ಲಿ ಇರಿಸಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ ಉಸಿರಾಟದ ಸಮಸ್ಯೆಯಿಂದ ಮುಖರ್ಜಿ ಅವರು ಅಗಷ್ಟ್ ೨೪ರಂದು ಆಸ್ಪತ್ರೆಗೆ ದಾಖಲಾಗಿದ್ರು. ಹೃದಯದ ರಕ್ತನಾಳ ಕಟ್ಟಿಕೊಂಡಿದ್ದರಿಂದ ೨ ಸ್ಟಂಟ್ಗಳನ್ನು ಅಳವಡಿಸಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು.