ಕೂಗು ನಿಮ್ಮದು ಧ್ವನಿ ನಮ್ಮದು

ಫೀಸ್ ಕಟ್ಟಲು ಕಾಲೇಜಿನಿಂದ ವಿದ್ಯಾರ್ಥಿಗೆ ಕಿರುಕುಳ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ಮಂಗಳೂರು: ಕೊಲೊಸೊ ಆಸ್ಪತ್ರೆಯ ಹಾಸ್ಟೇಲ್ ಅಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಇವತ್ತು ಸಾವನ್ನಪ್ಪಿದ್ದಾಳೆ. ಕಾಲೇಜಿನಿಂದ ಫೀಸ್ ಕಟ್ಟಲು ಒತ್ತಡ ಹಾಕುತ್ತಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿ ಮಂಗಳೂರಿನ ಕದ್ರಿ ಹತ್ತಿರ ಕೊಲಾಸೊ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದಳು.

ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು, ಮಂಗಳವಾರ ಹಾಸ್ಟೆಲ್ನ ಬಾತ್ ರೂಮ್ ಅಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ನಂತರ ವಿದ್ಯಾರ್ಥಿನಿಯನ್ನು ರಕ್ಷಿಸಿ, ಮಂಗಳೂರಿನ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇವತ್ತು ಈ ಹುಡಗಿ ಸಾವನ್ನಪ್ಪಿದ್ದಾಳೆ. ಕಾಲೇಜಿನಲ್ಲಿ ಫೀಸ್ ಕಟ್ಟಲು ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬಾಲಕಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಫೀಸ್ ಕಟ್ಟುವ ವಿಚಾರದಲ್ಲಿ ಕಾಲೇಜಿನಿಂದ ಕಿರುಕುಳ ನೀಡಲಾಗುತ್ತಿತ್ತು ಎಂಬ ಶಂಕೆ ಸಹ ವ್ಯಕ್ತವಾಗಿದೆ. ಈ ವಿಷಯಕ್ಕೆ ಕುರಿತಂತೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!