ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳ ಮೇಲೆ ಲಘು ಲಾಠಿ ಪ್ರಹಾರ
ರಾಯಚೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿ ಕೆ.ಶಿವನಗೌಡ ನಾಯಕ್ ಪರ ಜಿಲ್ಲೆಯ ದೇವದುರ್ಗಕ್ಕೆ ಪ್ರಚಾರಕ್ಕೆ ನಟ ಸುದೀಪ್ ಬಂದಿದ್ದು, ಈ ವೇಳೆ ನಟ ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.