ನಿಪ್ಪಾಣಿ: ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ ಹಾಗೂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರಕಾರದ ಡಬಲ್ ಇಂಜಿನ್ ಸರಕಾರದ ಅಭಿವೃದ್ದಿಯ ಲಾಭವನ್ನು ಪಡೆಯಲು ಬಿಜೆಪಿಯನ್ನ ಬೆಂಬಲಿಸಿ ಎಂದು ಸಚಿವೆ ನಿಪ್ಪಾಣಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಅ ಜೊಲ್ಲೆ ಮನವಿ ಮಾಡಿದರು.
ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ನಿಪ್ಪಾಣಿ ಮತಕ್ಷೇತ್ರದ ನಾಂಗನೂರ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ ಅವರು, ಮತ್ತಷ್ಟು ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲ ನೀಡಿ ಎಂದು ಮತಯಾಚನೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿಜಿ ಯವರ ಸಮರ್ಥ ಮತ್ತು ದೂರದರ್ಶಿತ್ವದ ಯೋಜನೆಗಳು ಭಾರತ ದೇಶವನ್ನ ವಿಶ್ವದ ನಕ್ಷೆಯಲ್ಲಿ ಪ್ರಮುಖ ಸ್ಥಾನ ದೊರಕಿಸುವಲ್ಲಿ ಸಫಲರಾಗಿದ್ದಾರೆ. ದೇಶದ ಸರ್ವತೋಮುಖ ಅಭಿವೃದ್ದಿಗೂ ತಮ್ಮದೇ ಅದ ವಿಶಿಷ್ಟ ಕೊಡುಗೆಯನ್ನು ನೀಡಿದ್ದಾರೆ. ಅದೇ ರೀತಿಯಲ್ಲಿ ರಾಜ್ಯದ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರಗಳು ರಾಜ್ಯವನ್ನ ದೇಶ ಹಾಗೂ ವಿದೇಶದ ನಕ್ಷೆಯಲ್ಲಿ ಪ್ರಮುಖ ಸ್ಥಾನ ಪಡೆಯುವತ್ತ ಮುನ್ನಡೆಸಿದ್ದಾರೆ. ಸಮಾಜದ ಎಲ್ಲಾ ವರ್ಗದವರ ಅಭಿವೃದ್ದಿಗೂ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದ್ದಾರೆ. ಇದೇ ರೀತಿಯ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರವಲ್ಲಿ ಎಲ್ಲರ ಮತಗಳೂ ಪ್ರಮಖವಾಗಿವೆ. ಈ ಹಿನ್ನಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಇದೇ ವೇಳೆ ಗ್ರಾಮದ ಶ್ರಿ ದಗಡು ಚೆಂಡಕೆ,ಶ್ರೀ ವಿನೋದ ಚೌಗಲೆ,ಶ್ರೀ ದಯಾನಂದ ಕೋಗಲೆ, ಶ್ರೀ ಜ್ಯೋತಿರ್ಲಿಂಗ ಚೆಂಡಕೆ, ಶ್ರೀ ಶೀತಲ ಚೆಂಡಕೆ, ಶ್ರೀ ಸಂತೋಷ ಕೊಗಲೆ, ಸೇರಿದಂತೆ ಒಟ್ಟು 20 ಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ನಮ್ಮ ಬಿಜೆಪಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಶ್ರೀ ಚಂದ್ರಕಾಂತ ಕೋಟಿವಾಲೆ ಉಪಾಧ್ಯಕ್ಷರಾದ ಶ್ರೀ ಎಂ.ಪಿ. ಪಾಟೀಲ, ಸದಸ್ಯರು ಸ್ಥಳೀಯ ಮುಖಂಡರು ಕಾರ್ಯಕರ್ತರು ಹಾಗೂ ಮತದಾರ ಬಾಂಧವರು ಉಪಸ್ಥಿತರಿದ್ದರು.