ಕೂಗು ನಿಮ್ಮದು ಧ್ವನಿ ನಮ್ಮದು

ಮೀನುಗಾರನನ್ನು ತಲೆ ಕೇಳಗಾಗಿ ನೇತು ಹಾಕಿ ಅಮಾನವೀಯ ಘಟನೆಗೆ ಸಾಕ್ಷಿಯಾದ ಇತರ ಮಿನುಗಾರು: ಕೇಸ್ ದಾಖಲು

ಮಂಗಳೂರು: ಮೀನುಗಾರನೋರ್ವರನ್ನು ತೂಗು ಹಾಕಿ ದೌರ್ಜನ್ಯ ಎಸಗಿದ ಘಟನೆ ಮಂಗಳೂರು ನಗರದ ಬಂದರ್ ದಕ್ಕೆಯಲ್ಲಿ‌‌ ಬೆಳಕಿಗೆ ಬಂದಿದೆ.

ಅಮಾನವೀಯ ಘಟನೆ

ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರನೊಬ್ಬನನ್ನು ಇತರ ಮೀನುಗಾರ ಕಾರ್ಮಿಕರೇ ಕಾಲು ಕಟ್ಟಿ ತೂಗು ಹಾಕಿ‌ ಹಿಂಸಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ‌ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಮಂಗಳೂರು ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ.

ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಲು ಪಾಂಡೇಶ್ವರ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಅದರಂತೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

error: Content is protected !!