ಕೂಗು ನಿಮ್ಮದು ಧ್ವನಿ ನಮ್ಮದು

ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು ಸೇರಿದಂತೆ ಐವರ ಭೀಕರ ಕೊಲೆ

ಮಂಡ್ಯ: ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬಿಭತ್ಸವಾಗಿ ಕೊಲೆಗೈಯಲಾಗಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ. ಇನ್ನು ಕೊಲೆಯಾದವರನ್ನು ಲಕ್ಷ್ಮೀ (26), ರಾಜ್ (12), ಕೋಮಲ್ (7), ಕುನಾಲ್ (4) ಹಾಗೂ ಗೋವಿಂದ (8) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಮಂಡ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು, ಶ್ವಾನ ದಳ ಕೂಡ ಸ್ಥಳಕ್ಕಾಗಮಿಸಿದೆ.

ಈ ಭೀಕರ ಕೃತ್ಯಕ್ಕೆ ಕೆಆರ್ ಎಸ್ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸಧ್ಯ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಮಶಾನ ಮೌನ ಆವರಿಸಿದೆ. ಮಾರಾಕಾಸ್ತ್ರದಿಂದ ಕೊಚ್ಚಿ‌ ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.

error: Content is protected !!