ಕೂಗು ನಿಮ್ಮದು ಧ್ವನಿ ನಮ್ಮದು

ಟ್ರ್ಯಾಕ್ಟರ್ ಪಲ್ಟಿ ಸ್ಥಳದಲ್ಲೇ ಮೂವರ ದುರ್ಮರಣ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಮೂವರು ದುರ್ಮರಣಕ್ಕಿಡಾಗಿದ್ದಾರೆ.

ಜೋಳ ಒಕ್ಕಣೆ ಯಂತ್ರ ಸಾಗಾಣಿಕೆ ಮಾಡುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ. ತಿ.ನರಸೀಪುರ ತಾಲ್ಲೂಕಿನ ಚಿಟಗಯ್ಯನಕೊಪ್ಪಲು ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ.

ಇನ್ನು ಪ್ರಕಾಶ್ (19), ಸಂತೋಷ್ (29), ಮರಿ ಜೋಗಿ (44) ಮೃತ ದುರ್ದೈವಿಗಳಾಗಿದ್ದು, ಸ್ಥಳಕ್ಕೆ ನರಸೀಪುರ ಪೊಲೀಸ್ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದು ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,
ತಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!