ಹುಬ್ಬಳ್ಳಿ: ಹುಬ್ಬಳ್ಳಿಯ ಶಿರಗುಪ್ಪಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೈದರಾಬಾದಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಐರಾವತ್ ಬಸ್ ಹಾಗೂ ಕಾರ್ ನಡುವೆ ಡಿಕ್ಕಿ ಹೊಡೆದ ಪರಿಣಾಮ, ಎಕ್ಸ್. ಯು.ವಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ದುರ್ಮರಣಕ್ಕಿಡಾಗಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ.
ಇನ್ನು ಈ ದುರ್ಘಟನೆಗೆ ಐರಾವತ್ ಬಸ್ಸು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದ್ದು, ಗಾಯಾಳುಗಳನ್ನ ಸ್ಥಳೀಯರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ, ಜೀವ ಉಳಿಸಿದ್ದಾರೆ.
ಶಿರಗುಪ್ಪಿ ಬಳಿಯ ರಸ್ತೆಯ ಮೊದಲ ತಿರುವಿನಲ್ಲಿಯೇ ರಾಂಗ್ ರೂಟಿಗೆ ಐರಾವತ್ ಬಂದಿದ್ದರಿಂದ ಎದುರಿಗೆ ಬಂದಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ಸಿನ ವೇಗ ಹೆಚ್ಚಾಗಿದ್ದರಿಂದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲಿಯೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಉಳಿದಂತೆ ಮೃತರ ಮಾಹಿತಿಯನ್ನ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಕಲೆ ಹಾಕುತ್ತಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.