ಬೆಂಗಳೂರು: ಹೌದು ೧೨ ರಿಂದ ೧೮ ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರವು ಈ ವಾರ ಸಮ್ಮತಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಜೊತೆಗೆ ಅಮದಾಬಾದ್ನ ಜೈಡಸ್ ಕ್ಯಾಡಿಲಾ ಕಂಪನಿಯ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರವು ಅನುಮತಿ ನೀಡುವ ಸಾಧ್ಯತೆಗಳು ಬಹಳ ಹೆಚ್ಚಾಗಿದೆ ಎನ್ನಲಾಗಿದೆ. ಇನ್ನೂ ೧೨ ರಿಂದ ೧೮ ವರ್ಷದ ಮಕ್ಕಳಿಗೆ ಲಸಿಕೆಯನ್ನು ನೀಡಲು ಅನುಮತಿ ಸಿಕ್ಕರೆ ದೇಶದಲ್ಲಿ ಮಕ್ಕಳಿಗೆ ಪ್ರಥಮ ಬಾರಿ ಕೋವಿಡ್ ಲಸಿಕೆ ನೀಡಿಕೆ ಅಭಿಯಾನ ಆರಂಭವಾದಂತಾಗುತ್ತದೆ. ಇನ್ನೂ ಜೈಡಸ್ ಕ್ಯಾಡಿಲಾ ಕಂಪನಿಯು ಜೈಕೋವ್ ಡಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವಂತೆ ಕೋರಿ ಜುಲೈ ೧ ರಂದು ಅರ್ಜಿ ಸಲ್ಲಿಸಲಾಗಿದೆ. ಜೊತೆಗೆ ಇಂಜೆಕ್ಷನ್ ಬಳಕೆ ಮಾಡದೆ ಚರ್ಮದ ಮೂಲಕ ದೇಹದ ಒಳಗೆ ಲಸಿಕೆಯನ್ನು ಸೇರಿಸುವುದು ಈ ಲಸಿಕೆಯ ವಿಶೇಷತೆಯಾಗಿದೆ ಎಂದು ಹೇಳಲಾಗುತ್ತಿದೆ.