ಶಿವಮೊಗ್ಗ: ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಇದೆ. ರಾಜ್ಯದಲ್ಲೂ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. 60 ವರ್ಷಗಳಿಂದ ದೇಶದ ಮತ್ತು ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. 2014 ರಿಂದ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿಯನ್ನು ಹೇಗೆಲ್ಲಾ ಮಾಡಿದ್ದಾರೆ
ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಪಂಚಕ್ಕೆ ಆರ್ಥಿಕ ಸಂಕಷ್ಟ ಬಂದ ಸಂದರ್ಭದಲ್ಲಿ ರಾಹುಲ್ ಗಾಂಧಿ ಏನಾದರೂ ಭಾರತದ ಪ್ರಧಾನಿಯಾಗಿದ್ದರೆ ಪಾಕಿಸ್ತಾನ ಮತ್ತು ಶ್ರೀಲಂಕಾಗಳಿಗಿಂತ ಮೊದಲು ಭಾರತ ದಿವಾಳಿ ಆಗುತ್ತಿತ್ತು ಎಂದು ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.