ಹುಬ್ಬಳ್ಳಿ: ಜಿಲ್ಲಾ ಪಂಚಾಯತ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣದ ಆರೋಪದಲ್ಲಿ ಬಂಧಿತನಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನ ಬೆಳಗಾವಿಗೆ ಶಿಪ್ಟ್ ಮಾಡಲಾಗಿದೆ. ಸಿಬಿಐ ಅಧಿಕಾರಿಗಳು ಬೆಳಗಾವಿಯ ಹಿಂಡಲಗಾ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. ಧಾರವಾಡದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಿದ ಹಿನ್ನಲೆ
ಬೆಳಗಾವಿಗೆ ಕರೆದುಕೊಂಡು ಹೋಗಲಾಗಿದೆ. ಸಿಬಿಐ ಅಧಿಕಾರಿಗಳು ಬಿಗಿ ಪೊಲೀಸ್ ಭದ್ರತೆಯಲ್ಲಿ ಎಸ್ಕಾರ್ಟ್ ವಾಹನದ ಮೂಲಕ ವಿನಯ್ ಕುಲಕರ್ಣಿಯನ್ನು ಬೆಳಗಾವಿಗೆ ಕರೆದೊಯ್ಯಲಾಗಿದೆ. ಇನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರಿಂದ ಈ ಸಲದ ದೀಪಾವಳಿಯನ್ನು ವಿನಯ್ ಜೈಲಿನಲ್ಲಿ ಆಚರಿಸುವುದು ಅನಿವಾರ್ಯವಾಗಿದೆ.