ಬೆಳಗಾವಿ: ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕಾ ಸ್ವೀಪ್ ಸಮಿತಿ ವತಿಯಿಂದ ಮಂಗಳವಾರ ಏಪ್ರಿಲ್ 25 ರಂದು ಸುವರ್ಣವಿಧಾನಸೌಧ ಆವರಣದಲ್ಲಿ ನಿಮ್ಮ ಮತ ನಿಮ್ಮ ಹಕ್ಕು, ನೈತಿಕವಾಗಿ ಮತ ಚಲಾಯಿಸಿ ಎಂಬ ಘೋಷವಾಕ್ಯದೊಂದಿಗೆ ಪವರ ಪ್ಯಾರಾಗ್ಲೈಡಿಂಗ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೊಯರ್, ಪೋಲಿಸ ವರಿಷ್ಠಾಧಿಕಾರಿಗಳಾದ ಸಂಜೀವ ಪಾಟೀಲ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಬಂಗಾರಪ್ಪನವರ, ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಜೇಶ ದಾನವಾಡಕರ್, ಯುವ ಜನ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರಾದ ಜಿನೇಶ್ವರ ಪಡನಾಡ, ಜಿಲ್ಲಾ ಎಸ್.ಬಿ.ಎಂ ಸಮಾಲೋಚಕ ಬಾಹುಬಲಿ ಮೆಳವಂಕಿ, ತಾಂತ್ರಿಕ ಸಂಯೋಜಕ ನಾಗರಾಜ ಯರಗುದ್ದಿ, ತಾಲ್ಲೂಕು ಐಇಸಿ ಸಂಯೋಜಕ ರಮೇಶ ಮಾದರ ಗ್ರಾಮ ಪಂಚಾಯತ ಸಿಬ್ಬಂದಿಗಳು, ವಿಶೇಷ ಚೇತನರು ಇದ್ದರು.