ಕೂಗು ನಿಮ್ಮದು ಧ್ವನಿ ನಮ್ಮದು

ಮನೆ ಮನೆಗೆ ನೀರು: ಜಲಜೀವನ್ ಮಿಷನ್ ಯೋಜನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಡಿಗೇರಿ ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಯೋಜನೆಗೆ 1.23 ಕೋಟಿ ರೂ. ಬಿಡುಗಡೆಯಾಗಿದ್ದು ಗ್ರಾಮದ ನೀರಿನ ಬವಣೆಯನ್ನು ನೀಗಿಸಲಿದೆ. ಪ್ರತಿ ಮನೆಗೆ ನಲ್ಲಿ ಅಳವಡಿಸಲಾಗುವುದು. ಅತ್ಯಂತ ಎಚ್ಚರದಿಂದ ಯೋಜನೆಯನ್ನು ಜನರು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ಹೇಳಿದರು. ಇಡೀ ಕ್ಷೇತ್ರದಲ್ಲಿ ನೀರು, ಶಿಕ್ಷಣ, ರಸ್ತೆಯಂತಹ ಮೂಲಭೂತ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುತ್ತಿದೆ. ಲಕ್ಷ್ಮಿ ಹೆಬ್ಬಾಳಕರ್ ಶಾಸಕರಾಗಿ ಆಯ್ಕೆಯಾದ ನಂತರ ಸಾವಿರಾರು ಕೋಟಿ ರೂ. ಯೋಜನೆಯನ್ನು ತಂದಿದ್ದು, ಕ್ಷೇತ್ರದ ಎಲ್ಲ ಭಾಗಗಳಲ್ಲಿ ಸಮಾನ ರೀತಿಯಲ್ಲಿ ಕಾಮಗಾರಿಗಳು ನಡೆಯುತ್ತಿವೆ ಎಂದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು, ಪ್ರಕಾಶ ಪಾಟೀಲ, ಮೃಣಾಲ ಹೆಬ್ಬಾಳಕರ್, ಸಿದ್ದು ಹಾವಣ್ಣವರ, ರವಿ ಮೇಳೆದ್, ಬಸನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಉಪಸ್ಥಿತರಿದ್ದರು.

error: Content is protected !!