ಕೂಗು ನಿಮ್ಮದು ಧ್ವನಿ ನಮ್ಮದು

ಸಿದ್ದರಾಮಯ್ಯ ವಿರುದ್ದ ಸಿಎಂ ಯಡಿಯೂರಪ್ಪ ವಾಗ್ದಾಳಿ: ಟಗರುಗೆ ರಾಜಾಹುಲಿ ಮಾಡಿರೊ ಮನವಿ ಏನು..!

ಮಂಗಳೂರು: ನಾಳೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಇರುವ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳೂರಿಗೆ ಆಗಮಿಸಿದ್ದಾರೆ. ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಸಿಎಂ ಯಡಿಯೂರಪ್ಪ ಅವರಿಗೆ ಬಿಜೆಪಿ ಮುಖಂಡರು ಸ್ವಾಗತ ಕೋರಿದ್ರು. ಸಿಎಂ ಯಡಿಯೂರಪ್ಪ ಜೊತೆ ಸಚಿವ ಆರ್.ಅಶೋಕ್ ಹಾಗೂ ಈಶ್ವರಪ್ಪ ಕೂಡ ಆಗಮಿಸಿದ್ದು, ನಾಳೆ ಮಂಳೂರಿನಲ್ಲಿ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿಎಂ ಯಡಿಯೂರಪ್ಪ ಬದಲಾವಣೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯಗೆ ಸಿಎಂ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ನವರ ಹೇಳಿಕೆಗೆ ನಾನು ರಿಯಾಕ್ಷನ್ ನೀಡುತ್ತಿರಲಿಲ್ಲ. ಆದರೆ ಮಾಧ್ಯಮದವರು ಪ್ರಶ್ನಿಸಿದ್ದಕ್ಕಾಗಿ ಪ್ರತಿಕ್ರಿಯಿಸುತ್ತಿದ್ದೇನೆ ಎಂದ ಸಿಎಂ, ಸಿದ್ದರಾಮಯ್ಯ ಇನ್ನಾದ್ರೂ ಬೇಜವಾಬ್ದಾರಿ ಹೇಳಿಕೆ ನೀಡೋದು ನಿಲ್ಲಿಸಬೇಕು. ನಾನು ಕೂಡ ಇದೇ ರೀತಿಯ ಹೇಳಿಕೆ ನೀಡಲೇ..? ವಿಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಆಗುತ್ತೆ ಅಂತ.. ಎಂದು ಸಿಎಂ ಪ್ರಶ್ನಿಸಿದ್ದಾರೆ. ಜವಾಬ್ದಾರಿಯುತವಾಗಿ ಮಾತಾಡಲು ಸಿದ್ದರಾಮಯ್ಯ ರಲ್ಲಿ ವಿನಂತಿ ಮಾಡುತ್ತೇನೆ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಇನ್ನು ಶಿರಾ, ಆರ್.ಆರ್.ನಗರ ಚುನಾವಣೆ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದೆ. ಆ ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ದಯನೀಯ ಸೋಲು ಅನುಭವಿಸಲಿದೆ. ಬೈ ಎಲೆಕ್ಷನ್, ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನವರು ಸೋಲನುಭವಿಸಲಿದ್ದಾರೆ. ಬಿಜೆಪಿ ಗೆದ್ಮೇಲೆ ಯಾರು ರಾಜೀನಾಮೆ ಕೊಡ್ಬೇಕಾಗುತ್ತೆ..? ಎಂದು ಸಿದ್ದರಾಮಯ್ಯನವ್ರಿಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಚುನಾವಣೆಯಲ್ಲಿ ಕಾಂಗ್ರೆಸಿಗೆ ಸೋಲಾಗಲಿದೆ. ಆವಾಗ ಕ್ರಮ ಸಿದ್ದರಾಮಯ್ಯ ಮೇಲೋ ಅಥವಾ ಯಾರ ಮೇಲೆ.. ಎಂದು ಮಂಗಳೂರಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

error: Content is protected !!