ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಹಳೇ ದ್ವೇಷದ ಹಿನ್ನೆಲೆ ಮನೆಗೆ ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ಈ ಕೊಲೆ ಘಟನೆ ನಡೆದಿದ್ದು, ನಾಗೇಶ್ ಪಾಟೀಲ್ 28 ಎಂಬ ಯುವಕನನ್ನು ಮನೆಗೆ ನುಗ್ಗಿ ಹಲ್ಲೆ ಮಾಡಿದ ಬಳಿಕ ದುಷ್ಕರ್ಮಿಗಳು ಯುವಕನನ್ನು ಮನೆಯಿಂದ ಹೊರಗೆ ಎಳೆದು ತಂದು ಕೊಲೆ ಮಾಡಿದ್ದಾರೆ.
ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದು, ಬೆಳಗಾವಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಪೊಲೀಸರು ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.